ನಾಳೆ ಶಿವಮೊಗ್ಗ ಜಿಲ್ಲೆಯಲ್ಲಿ ಸಾರಿಗೆ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ‌ ; ಯಾಕೆ ?

0 0

ಶಿವಮೊಗ್ಗ: ಮೇ.04 ರಂದು ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳಿಗೆ 2ನೇ ಹಂತದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 108 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಆದ್ದರಿಂದ ಮೇ-04 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.

Leave A Reply

Your email address will not be published.

error: Content is protected !!