ನೀವು ಫೆ.27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಹೋಗುತ್ತೀರಾ ? ಹಾಗಾದ್ರೆ ಸಂಸದ ಬಿವೈಆರ್ ಅತೀ ಮುಖ್ಯ ಸೂಚನೆಯೊಂದನ್ನು ನೀಡಿದ್ದಾರೆ ಇಲ್ಲಿದೆ ನೋಡಿ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕನ ಹೆಸರು ಇಡಲು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.


ಅವರು ಮಂಗಳವಾರ ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮೊದಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಇಡಲು ಚರ್ಚೆ
ನಡೆದಿತ್ತು. ಸಂಪುಟ ಸಭೆಯಲ್ಲೂ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ಸ್ವತಃ ಯಡಿಯೂರಪ್ಪನವರೇ ತಮ್ಮ ಹೆಸರನ್ನುಇಡಲು ನಿರಾಕರಿಸಿದರಲ್ಲದೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನಿಡಲು ಸಲಹೆ ನೀಡಿದ್ದರು. ಈ ಸಲಹೆಗೆ ಮನ್ನಣೆ ನೀಡಿದ ರಾಜ್ಯ ಸರ್ಕಾರ ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಕುವೆಂಪು ಹೆಸರನ್ನು ಅಂತಿಮಗೊಳಿಸಿ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಇದರ ಜೊತೆಗೆ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕ ಹೆಸರಿಡಲು ಸಹ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದರು.


ಕುವೆಂಪು ಮತ್ತು ಶಿವಪ್ಪನಾಯಕ ಅರಸರು ಜಿಲ್ಲೆಯ ಎರಡು ಕಣ್ಣುಗಳಿದ್ದಂತೆ. ಶಿವಪ್ಪ ನಾಯಕರು ಶಿಸ್ತಿಗೆ ಹೆಸರಾದವರು. ಕಂದಾಯ ವ್ಯವಸ್ಥೆಯನ್ನು ಉತ್ತಮಗೊಳಿಸಿ ಉತ್ತಮ ಆಡಳಿತ ನೀಡಿದವರು. ಹಾಗೂ ಕುವೆಂಪು ರಾಷ್ಟ್ರ ಕವಿಗಳು. ವಿಶ್ವಮಾನವ ಪ್ರಜ್ಞೆ ಬೆಳೆಸಿದವರು. ಜ್ಞಾನದ ಶಿಖರವಾಗಿದ್ದಾರೆ. ಈ ಇಬ್ಬರ ಹೆಸರನ್ನು ಅಧಿಕೃತಗೊಳಿಸಿರುವುದು ಸ್ವಾಗತದ ವಿಷಯ. ಸಾಧಕರನ್ನ ಜಾತಿಗೆ ಸೀಮಿತಗೊಳಿಸದೆ ಈ ಹೆಸರುಗಳನ್ನು ಸೂಚಿಸಲಾಗಿದೆ ಎಂದರು.


ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ ಮತ್ತು ಪಕ್ಷದ ವತಿಯಿಂದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರು ಬೆಳಿಗ್ಗೆ 11ಕ್ಕೆ ಬಂದು ಮಧ್ಯಾಹ್ನ 1 ಗಂಟೆಗೆ ವಾಪಾಸು ಹೋಗುತ್ತಾರೆ. ಈ ಎರಡು ಗಂಟೆಯ ಅವಧಿಯನ್ನು ನಮಗೆ ನೀಡಿದ್ದಾರೆ. ಒಂದೇ ಜಾಗದಲ್ಲಿ ಎಲ್ಲಾ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಲಿದೆ ಎಂದರು.


ವಿಮಾನ ನಿಲ್ದಾಣ ಸಂತ್ರಸ್ತರ ನಿವೇಶನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ರಾಜ್ಯಸರ್ಕಾರ ಆ ನಿಟ್ಟಿನತ್ತ ಗಮನಹರಿಸಿದೆ. ಗೃಹ ಮಂಡಳಿಗೆ ಈಗಾಗಲೇ 35 ಕೋಟಿ ರೂ.ಗಳನ್ನು ಪಾವತಿಸಿದೆ. ಜಿಲ್ಲಾಧಿಕಾರಿಗಳು ಮುಂದಿನ ನಿರ್ವಹಣೆ ಮಾಡಲಿದ್ದಾರೆ. ಭೂಮಿ ಕೊಟ್ಟ ಎಲ್ಲ ರೈತರಿಗೂ ನಿವೇಶನ ಸಿಗಲಿದೆ. ಈ ಬಗ್ಗೆ ಯಾವ ಆತಂಕವೂ ಬೇಡ ಎಂದ ಅವರು, ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ಒಪ್ಪಂದವನ್ನೂ ಮಾಡಿಕೊಂಡಿಲ್ಲ ಆದರೆ ಮಾನವೀಯತೆಯ ದೃಷ್ಟಿಯಿಂದ ಅಲ್ಲಿ ಉಳಿದಿರುವ ಉದ್ಯೋಗಗಳನ್ನು ಕನ್ನಡಿಗರಿಗೆ ಮತ್ತು ಸ್ಥಳೀಯರಿಗೆ ನೀಡುವ ಬಗ್ಗೆ ಯೋಚಿಸಲಾಗುವುದು ಎಂದರು.


ಸಾರ್ವಜನಿಕರಿಗೆ ಒಂದು ವಿಶೇಷ ಸೂಚನೆಯೆಂದರೆ, ಬೆಳಿಗ್ಗೆ 10 ಗಂಟೆಯ ಒಳಗೆ ವಿಮಾನ ನಿಲ್ದಾಣದ ಗೇಟ್ ಬಳಿ ಇರಲೇಬೇಕು. ಆ ನಂತರ ಬರುವವರಿಗೆ ಗೇಟ್ ಹಾಕಿರುತ್ತಿದೆ. ಆದ್ದರಿಂದ ಕಾರ್ಯಕ್ರಮಕ್ಕೆ ಬರುವವರು 10 ಗಂಟೆಗೆ ಮುಂಚಿತವಾಗಿಯೇ ಸೇರಬೇಕು ಎಂದು ಸಂಸದವರು ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಶಿವರಾಜ್, ಬಿ.ಕೆ. ಶ್ರೀನಾಥ್, ಜಗದೀಶ್ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,747FollowersFollow
0SubscribersSubscribe
- Advertisement -spot_img

Latest Articles

error: Content is protected !!