ನೆಲ-ಜಲ, ಭಾಷೆ ವಿಷಯದಲ್ಲಿ ಸಂಘಟನಾತ್ಮಕ ಹೋರಾಟಕ್ಕೆ ಸಿದ್ದ ; ಬೇಳೂರು ಗೋಪಾಲಕೃಷ್ಣ
ರಿಪ್ಪನ್‌ಪೇಟೆ: ಕನ್ನಡ ನೆಲ-ಜಲ ಗಡಿ ಭಾಷೆಯ ವಿಷಯ ಬಂದಾಗ ರಾಜಕೀಯ ಪಕ್ಷ ದೂರವಿಟ್ಟು ಧ್ವನಿ ಎತ್ತುವ ಮೂಲಕ ಸಂಘಟನಾತ್ಮಕ ಹೋರಾಟಕ್ಕೆ ಸದಾ ಸಿದ್ದನಾಗಿದ್ದೇನೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ರಿಪ್ಪನ್‌ಪೇಟೆ ಕಸ್ತೂರಿ ಕನ್ನಡ ಸಂಘ ಹಾಗೂ ದಿ|| ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು ನುಡಿ ಸಂರಕ್ಷಣೆ ವಿಷಯ ಬಂದಾಗ ನಾವು ಸಂಘಟನೆಯಾಗುವುದರೊಂದಿಗೆ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದ ಅವರು, ನಾನು ಕಳೆದ ಹತ್ತು ವರ್ಷಗಳಿಂದ ರಾಜಕೀಯ ಅಜ್ಞಾತ ವಾಸ ಅನುಭವಿಸಬೇಕಾಯಿತು. ಆದರೂ ನನ್ನ ಮತದಾರರು ಸೋತಾಗಲು ನನ್ನ ಕೈಬಿಡದೇ ಬೆಳೆಸಿದ್ದೀರಿ ಈ ಬಾರಿಯ ಚುನಾವಣೆಯಲ್ಲಿ ನನಗೆ ಪುನಃ ಜನಸೇವೆ ಮಾಡಲು ಅವಕಾಶ ಕಲ್ಪಿಸಿದ್ದೀರಿ ಅದನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ಹೇಳಿ ಅಭಿವೃದ್ಧಿಯಲ್ಲಿ ಜಾತಿ ಭೇದ ಭಾವನೆ ಮಾಡದೇ ಕ್ಷೇತ್ರದ ಸರ್ವಾಂಗೀಣಾಭಿವೃದ್ಧಿಗೆ ಶ್ರಮಿಸುತ್ತೇನೆಂದ ಹೇಳಿ, ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಸಿದ್ದರಾಗಬೇಕು ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದರು.
ಕಸ್ತೂರಿ ಕನ್ನಡ ಸಂಘದ ದಿ|| ಪುನೀತ್‌ರಾಜ್ ಅಭಿಮಾನಿ ಬಳಗದ ಅಧ್ಯಕ್ಷ ಉಲ್ಲಾಸ್ ತೆಂಕೋಲ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಕಸ್ತೂರಿ ಕನ್ನಡ ಸಂಘದ ಗೌರವಾಧ್ಯಕ್ಷ ಮೆಣಸೆ ಆನಂದ, ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಆರ್.ಎ.ಚಾಬುಸಾಬ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಯುವಮುಖಂಡ ಕೆ.ಎಸ್.ಪ್ರಶಾಂತ, ಗ್ರಾಮ ಪಂಚಾಯ್ತಿ ಸದಸ್ಯ ಡಿ.ಈ.ಮಧುಸೂದನ್, ಎನ್.ಚಂದ್ರೇಶ್, ಜೆಡಿಎಸ್ ಜಿಲ್ಲಾ ಮುಖಂಡ ಜಿ.ಎಸ್.ವರದರಾಜ್, ಅರಸಾಳು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಉಮಾಕರ, ಸಂತೋಷ, ಇನ್ನಿತರರು ಪಾಲ್ಗೊಂಡಿದ್ದರು.
ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪಿಎಸ್‌ಐ ಪ್ರವೀಣ್ ಎಸ್.ಪಿ.ಬಹುಮಾನ ವಿತರಿಸಿದರು.
ಪ್ರಣತಿ ಪ್ರಾರ್ಥಿಸಿದರು. ಹಸನಬ ಸ್ವಾಗತಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ಜಿ.ಆರ್.ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಧರ ವಂದಿಸಿದರು.
ನಂತರ ಝೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕು|| ಸಾದ್ವಿನಿ ಕೊಪ್ಪ, ಪ್ರಖ್ಯಾತ ಗಾಯನ ಕಲಾವಿದ ಮೆಹಬೂಬ್‌ಸಾಬ್ ಮತ್ತು ಅಶ್ವಿನ್‌ಶರ್ಮ, ಎದೆ ತುಂಬಿಹಾಡುವೆನು ಖ್ಯಾತಿಯ ಸಾನ್ವಿ ಜಿ.ಭಟ್ ಇವರಿಂದ ರಸಮಂಜರಿ ಕಾರ್ಯಕ್ರಮ ಜರುಗಿತು.