ನೇಣು ಬಿಗಿದುಕೊಂಡು ಪತ್ರಕರ್ತ ಆತ್ಮಹತ್ಯೆ

0 6,825

ಸಾಗರ : ಇಲ್ಲಿನ ಸಾಗರ ಮುದ್ರಣಾಲಯದ ಮಾಲೀಕ ಹಾಗೂ ಪತ್ರಕರ್ತ ಪಿ. ಅತ್ರಿ (55) ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.


ಪಿ. ಅತ್ರಿ ಅವರು ಮಲೆನಾಡು ಮಲ್ಲಿಗೆ ವಾರಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಂಡಿದ್ದರು. ಕ್ರೀಡಾ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದ ಅವರು ಲೆದರ್ ಕ್ರಿಕೇಟ್ ಬೆಳವಣಿಗೆಗೆ ತಮ್ಮದೆ ಕೊಡುಗೆ ನೀಡಿದ್ದರು.


ಗುರುವಾರ ರಾತ್ರಿ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಪವಿಭಾಗೀಯ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಂತರ ಮೃತರ ಅಂತ್ಯಕ್ರಿಯೆಯು ಮಾರಿಕಾಂಬಾ ರುದ್ರಭೂಮಿಯಲ್ಲಿ ಶುಕ್ರವಾರ ನೆರವೇರಿತು.


ಪಿ.ಅತ್ರಿ ಅವರ ನಿಧನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

Leave A Reply

Your email address will not be published.

error: Content is protected !!