ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ, ಪೆಂಡಲ್ ಬಳಿ ಸಿ.ಸಿ. ಕ್ಯಾಮೆರಾ ಕಡ್ಡಾಯವಾಗಿ ಆಳವಡಿಸಿ ; ಗುರಣ್ಣ ಎಸ್ ಹೆಬ್ಬಾಳ್

0 256


ಹೊಸನಗರ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ ಇದರ ಜೊತೆಗೆ ಶಾಂತಿ ಕಾಪಾಡಿ ಪೆಂಡಲ್ ಬಳಿ ಸಿ.ಸಿ ಕ್ಯಾಮರಾ ಕಡ್ಡಾಯವಾಗಿ ಆಳವಡಿಸಿ ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರು ಸಾರ್ವಜನಿಕ ಗಣಪತಿ ಸ್ಥಾಪಿಸುವವರಿಗೆ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಸಾರ್ವಜನಿಕ ಗಣಪತಿ ಸ್ಥಾಪಿಸುವ ಸಂಘದ ಮುಖ್ಯಸ್ಥರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕು ಶಾಂತಿ ಪ್ರಿಯ ಊರಾಗಿದೆ. ಎಲ್ಲಿಯೂ ಶಾಂತಿಗೆ ಭಂಗವಾಗದಂತೆ ನಡೆದುಕೊಳ್ಳಬೇಕು ಸಾರ್ವಜನಿಕ ಗಣಪತಿ ಸ್ತಾಪಿಸುವವರು ಕಡ್ಡಾಯವಾಗಿ ಸಿ.ಸಿ ಕ್ಯಾಮರ ಆಳವಡಿಸಿಕೊಂಡಿರಬೇಕು ಎಲ್ಲಿಯೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಾರ್ವಜನಿಕ ಗಣಪತಿ ಸ್ಥಾಪಿಸಬೇಕು. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಗಳನ್ನು ನೀಡಿದ್ದು ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ತಾಲ್ಲೂಕಿನ ಯಾವುದೇ ಜಲಮೂಲಗಳಲ್ಲಿ ಪಿಓಪಿ ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದು ನಿಷೇಧವಾಗಿದೆ. ಈ ಆದೇಶ ಉಲ್ಲಂಘಿಸಿದರೇ ಐ.ಪಿ.ಸಿ ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಎಂದು ತಿಳಿಸಿದರು.


ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ನಂತರ ಗೌರಿ-ಗಣೇಶ ಮೂರ್ತಿಗಳನ್ನು ಗ್ರಾಮ ಪಂಚಾಯತಿ ಮತ್ತು ಪಟ್ಟಣ ಪಂಚಾಯತಿ ಗುರುತಿಸಿದ ಸ್ಥಳದಲ್ಲಿಯೇ ವಿಸರ್ಜಿಸಬೇಕು ಇದರ ಜೊತೆಗೆ ಹಲಸಿನ ಮಾವಿನ ತೋರಣ ಹೂವು ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕವಾಗಿ ಪಟ್ಟಣ ಪಂಚಾಯತಿಯ ಸ್ವಚ್ಚತಾ ವಾಹನಕ್ಕೆ ಹಾಕಬೇಕು ಅದನ್ನು ಯಾವುದೇ ಕಾರಣಕ್ಕೂ ನೀರಿಗೆ ಹಾಕಬಾರದು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸಲಾಗಿದ್ದು ಯಾವುದೇ ಕಾರಣಕ್ಕೂ ಏಕ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಸಾರ್ವಜನಿಕ ಗಣಪತಿ ಸ್ಥಾಪಿಸುವವರು ಕಡ್ಡಾಯವಾಗಿ ಗ್ರಾಮಪಂಚಾಯಿತಿ ಪಟ್ಟಣ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಪರ್ಮಿಶನ್ ಪಡೆದಿರಬೇಕು. ಸ್ವಚ್ಚತೆಗೆ ಹೆಚ್ಚಿನ ಗಮನ ಹರಿಸಬೇಕು ಇದರ ಜೊತೆಗೆ ಶಾಂತಿ ಭಂಗವಾಗದಂತೆ ಕಾಪಾಡಿಕೊಳ್ಳಬೇಕು ಯಾವುದೇ ಅನಾಹುತವಾದರೂ ಸಂಪೂರ್ಣ ಜವಾಬ್ದಾರಿ ಸಂಘದ ಸಮಿತಿಯೇ ಆಗಿದ್ದು ಎಲ್ಲ ಸಂದರ್ಭದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈ ಜೊಡಿಸಬೇಕೆಂದು ಈ ಸಂದರ್ಭದಲ್ಲಿ ಕೇಳಿಕೊಂಡರು.


ಈ ಸಂದರ್ಭದಲ್ಲಿ ಪೋಲೀಸ್ ಸಬ್‌ಇನ್ಸ್‌ಪೆಕ್ಟರ್ ವೈ,ಕೆ ಶಿವಾನಂದ ಠಾಣಾ ಸಿಬ್ಬಂದಿಗಳು ಹಾಗೂ ಸಾರ್ವಜನಿಕ ಗಣಪತಿ ಕಮಿಟಿಯ ಅಧ್ಯಕ್ಷ ಸದಸ್ಯರುಗಳು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!