ಪೊಲೀಸರ ಭರ್ಜರಿ ಬೇಟೆ ; ಲಕ್ಷ ಲಕ್ಷ ಹಣ, ವಸ್ತುಗಳು ಜಪ್ತಿ
ಶಿವಮೊಗ್ಗ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯಿಲ್ಲದೇ ಸಾಗಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಸೀರೆ ಹಾಗೂ ನಗದು ಹಣವನ್ನು ಚೆಕ್ ಪೋಸ್ಟ್’ಗಳಲ್ಲಿ ವಶಕ್ಕೆ ಪಡೆಯಲಾಗಿದೆ.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 5.40 ಲಕ್ಷ ರೂ.ಗಳ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು, ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ರೂ. 98 ಲಕ್ಷ ನಗದು ಹಣ, ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ರೂ 12 ಲಕ್ಷ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.

ಹಾಗೆಯೇ, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ 59 ಲಕ್ಷ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.