ಪ್ರಬಂಧ ಸ್ಪರ್ಧೆ ; ಮಸಗಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೊಸನಗರ: ಗಾಂಧಿ ಜಯಂತಿ ಪ್ರಯುಕ್ತ ಇಂದು ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಮಸಗಲ್ಲಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿ ಹೆಚ್.ಪಿ.ರಕ್ಷಿತಾ ಪ್ರೌಢ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಾರ್ತಾ ಮತ್ತು ಪ್ರಸಾರ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ “ಗಾಂಧೀಜಿ ನನಗೇಕೆ ಇಷ್ಟವಾಗುತ್ತಾರೆ” ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಇವರು ಶಿವಮೊಗ್ಗ ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಪ್ರಶಸ್ತಿ ಪತ್ರ ಮತ್ತು 3 ಸಾವಿರ ರೂ. ನಗದು ಬಹುಮಾನ ನೀಡಿದರು.
ಹೊಸನಗರ ಬಿಇಒ ಹೆಚ್.ಆರ್. ಕೃಷ್ಣಮೂರ್ತಿ, ಹೊಸನಗರ ತಾಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೇಣುಕೇಶ್ ಮತ್ತು ಮಾಸಗಳಲ್ಲಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ರಕ್ಷಿತಾಳರನ್ನು ಅಭಿನಂದಿಸಿದ್ದಾರೆ.