ಫೆ.24 ರಂದು ಚೌಡೇಶ್ವರಿ ನಾಗದೇವರ ವಾರ್ಷಿಕೋತ್ಸವ

0 121

ಹೊಸನಗರ: ಹುಂಚ ರೋಡ್ ನಾಗಯಕ್ಷಿ ಶ್ರೀ ಚೌಡೇಶ್ವರಿ ನಾಗದೇವರ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಫೆ. 24ರ ಶನಿವಾರ ಏರ್ಪಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.

ಅವರು ದೇವಸ್ಥಾನದ ಆವರಣದಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ಶನಿವಾರ ಬೆಳಿಗ್ಗೆಯಿಂದ ಪೂಜಾ ಕಾರ್ಯಕ್ರಮ ಆರಂಭವಾಗಲಿದ್ದು ಶ್ರೀ ನಾಗದೇವರಿಗೆ ಶುದ್ಧ ಕಲಶಾಭಿಷೇಕ ಮತ್ತು ಪೂಜೆ ನಾಗಯಕ್ಷಿ ಮತ್ತು ಚೌಡೇಶ್ವರಿ ದೇವರಿಗೆ ಪಂಚಾಮೃತ ಅಭಿಷೇಕ ಮತ್ತು ಪೂಜೆ ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಯಕ್ಷಗಾನ:
ಶನಿವಾರ ರಾತ್ರಿ 9 ಗಂಟೆಯಿಂದ ಶ್ರೀ ಕ್ಷೇತ್ರ ಹಟ್ಟಿಯಂಗಡಿಯವರಿಂದ ‘ರಾಮಾಶ್ವಮೇಧ-ಭುವನಭಾರ್ಗವ’ ಎಂಬ ಪೌರಾಣಿಕ ಯಕ್ಷಗಾನವನ್ನು ಏರ್ಪಡಿಸಲಾಗಿದ್ದು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಕೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಉಪಾಧ್ಯಕ್ಷ ಬಿ.ಎಂ ರಾಮು, ಕಾರ್ಯದರ್ಶಿ ಹರೀಶ್‌ಕುಮಾರ್, ನಿರ್ದೇಶಕರಾದ ಮಂಜುನಾಥ್, ಹೆಚ್.ಆರ್ ಸುರೇಶ್ ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!