ಫೆ.27ರಂದು ಪ್ರಧಾನಮಂತ್ರಿ ಶಿವಮೊಗ್ಗಕ್ಕೆ ಆಗಮನ ಹಿನ್ನೆಲೆ ; ಸಾರಿಗೆ ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗ: ಫೆ.27ರಂದು ಭಾರತ ಸರ್ಕಾರದ ಪ್ರಧಾನಮಂತ್ರಿಗಳು ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಮಾಡುವುದರಿಂದ ಫೆ. 26 ರ ಮಧ್ಯಾಹ್ನದಿಂದ 27 ರವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಕ.ರಾ.ರ.ಸಾ.ನಿಗಮದ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ಆಗಮಿಸುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 200 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಶಿವಮೊಗ್ಗ ವಿಭಾಗದ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,755FollowersFollow
0SubscribersSubscribe
- Advertisement -spot_img

Latest Articles

error: Content is protected !!