ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಹೊಸನಗರ ತಾಲ್ಲೂಕಿನ ಎಲ್ಲ ಸರ್ಕಾರಿ ನೌಕರರು ಪಾಲ್ಗೊಳ್ಳಲು ಕರೆ

0 666

ಹೊಸನಗರ : ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮಹಾ ಸಮ್ಮೇಳನವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದು ಈ ಸಮ್ಮೆಳನಕ್ಕೆ ಹೊಸನಗರ ತಾಲ್ಲೂಕಿನ ಎಲ್ಲ ಸರ್ಕಾರಿ ನೌಕರರು ಭಾಗವಹಿಸಬೇಕೆಂದು ಹೊಸನಗರ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ ಕರೆ ನೀಡಿದ್ದಾರೆ.

ಅವರು ಇಲ್ಲಿನ ತಹಶೀಲ್ದಾರ್ ರಶ್ಮಿ ಹಾಗೂ ಕಂದಾಯ ಇಲಾಖೆಯ ಎಲ್ಲ ನೌಕರರಿಗೆ ಕರಪತ್ರ ನೀಡಿ ಮಾತನಾಡಿ, ಈ ಸಮ್ಮೇಳನದಲ್ಲಿ 7ನೇ ವೇತನ ಆಯೋಗದಿಂದ ವರದಿ ಪಡೆದು ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವುದು, ಎನ್‌ಪಿಎಸ್ ರದ್ದು ಮಾಡಿ ಓಪಿಎಸ್ ಮರು ಸ್ಥಾಪಿಸುವ ಸಲುವಾಗಿ ಮೊದಲನೇ ಹಂತದಲ್ಲಿ ಎನ್ ಪಿ.ಎಸ್ ನೌಕರರ ವೇತನದಲ್ಲಿ ಕಟಾವಣೆಯಾಗುತ್ತಿರುವ ವಂತಿಕೆಯನ್ನು 2024ರಿಂದ ಕಡಿತಗೊಳಿಸುವುದು ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವುದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಸಮಾವೇಶ ನಡೆಸಲಾಗುವುದು ಈ ಸಮಾವೇಶಕ್ಕೆ ಎಲ್ಲ ಸರ್ಕಾರಿ ನೌಕರರು ಆಗಮಿಸಿ ನಮ್ಮ ತಾಲ್ಲೂಕಿನ ಸರ್ಕಾರಿ ನೌಕರರ ಒಗ್ಗಟ್ಟು ಪ್ರರ್ದಶಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಕೇಳಿಕೊಂಡರು.

ಈ ಕರಪತ್ರ ನೀಡುವ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷರಾದ ಬಸವಣ್ಯಪ್ಪ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸ್ವಾಮಿ ಖಜಾಂಚಿ ಪ್ರಭಾಕರ್, ಶಿರಾಸ್ಥೆದಾರ್ ಸುಧೀಂದ್ರಕುಮಾರ್, ಕಟ್ಟೆ ಮಂಜುನಾಥ್, ವೀರಭದ್ರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!