ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಮಕ್ಕಳ ಸಹಾಯವಾಣಿಯ ಅಧಿಕಾರಿಗಳು 12 ವರ್ಷದ ಮೇಘನಾ ಎಂಬ ಹೆಣ್ಣುಮಗುವನ್ನು ರಕ್ಷಿಸಿ ಪಾಲನೆ, ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ.
ತಂದೆ ನಾಗಪ್ಪ, ತಾಯಿ ಚಿನ್ನಮ್ಮ ಎಂಬುದಾಗಿ ಬಾಲಕಿಯು ತಿಳಿಸಿದ್ದು ಪುನರ್ವಸತಿ ಹಿತದೃಷ್ಟಿಯಿಂದ ಬಾಲಕಿಯ ಪೋಷಕರು, ಸಂಬಂಧಿಕರು ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲ ಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-295511 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.