ಬೆಳ್ಳಂಬೆಳಗ್ಗೆ Shivamogga DCC Bank ಅಧ್ಯಕ್ಷ ಆರ್.ಎಂ.ಎಂ. ಮನೆಗಳ ಮೇಲೆ ಇಡಿ ದಾಳಿ !

0 2,759

ತೀರ್ಥಹಳ್ಳಿ : ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಇಡಿ ದಾಳಿ ಆಗಿದೆ. ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.

ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆರ್.ಎಂ. ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಆರ್.ಎಂ.ಎಂ. ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.

ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದಾರೆ. ಸರ್ಕಾರಿ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಆರ್.ಎಂ.ಎಂ. ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

5ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು,ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Leave A Reply

Your email address will not be published.

error: Content is protected !!