ಮೂಲ ಸಂಸ್ಕೃತಿ- ಕನ್ನಡ ಸಂಸ್ಕೃತಿ
ತಳ ಸಮುದಾಯಗಳ ವಿಶಿಷ್ಟ ಕಲೆಗಳ ಪ್ರದರ್ಶನ

0 6


ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾ.16 ರ ಬೆಳಗ್ಗೆ 10:30 ಕ್ಕೆ ನಗರದ ಫ್ರೀಡಂ ಪಾರ್ಕ್‍ನಲ್ಲಿ ಮೂಲ ಸಂಸ್ಕೃತಿ – ಕನ್ನಡ ಸಂಸ್ಕೃತಿ ಎಂಬ ಘೋಷಣೆಯೊಂದಿಗೆ ನಶಿಸುತ್ತಿರುವ ತಳಸಮುದಾಯದ ವಿಶಿಷ್ಟ ಕಲೆಗಳಲ್ಲಿ ಜಿಲ್ಲಾ ಶಿಬಿರದಲ್ಲಿ ತರಬೇತಿ ಪಡೆದ ಆಯ್ದ ಕಲಾಪ್ರಕಾರಗಳ ಜಿಲ್ಲಾಮಟ್ಟದ ಪ್ರದರ್ಶನ ಹಾಗೂ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.


ಶಾಸಕ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೇ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ನೆರವೇರಿಸುವರು. ಗೃಹ ಸಚಿವ ಆರಗ ಜ್ಞಾನೇಂದ್ರ, ಕನ್ನಡ ಮತ್ತು ಸಂಸ್ಕೃತಿ. ಇಲಾಖೆ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವರುಗಳ ಘನ ಉಪಸ್ಥಿತಿ ಇರಲಿದೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ಜನಪ್ರತಿನಿಧಿಗಳು, ವಿವಿಧ ನಿಗಮ/ ಮಂಡಳಿ/ ಪ್ರಾಧಿಕಾರಗಳ ಅಧ್ಯಕ್ಷರು, ಮೂಲ ಸಂಸ್ಕೃತಿ – ಕನ್ನಡ ಸಂಸ್ಕೃತಿ ಯೋಜನೆಯ ರಾಜ್ಯ ಸಂಚಾಲಕರು, ಜಿಲ್ಲಾ ಸಂಚಾಲಕರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತ ಕೆ. ಮಾಯಾಣ್ಣ ಗೌಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಅಂದು ಡೊಳ್ಳುಕುಣಿತ, ಪುರವಂತಿಕೆ, ಡಕ್ಕೆ ಕುಣಿತ, ತಮಟೆ ವಾದನ ಹಾಗೂ ಜೋಗಿ ಪದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Leave A Reply

Your email address will not be published.

error: Content is protected !!