ರಾಜ್ಯ ಬಜೆಟ್ ; ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದ್ದೇನು ?

ಶಿವಮೊಗ್ಗ: ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಕೊನೆಯ ಬಜೆಟ್ ಮಂಡಿಸಿದ್ದು, ಎಲ್ಲ ವರ್ಗಗಳು, ಕ್ಷೇತ್ರಗಳು ಹಾಗೂ ಜಿಲ್ಲೆಗಳನ್ನು ತೃಪ್ತಿಪಡಿಸುವ ಪ್ರಯತ್ನವನ್ನು ಮಾಡಲಾಗಿದೆ.

ಈ ಬಾರಿಯ ಬಜೆಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಜಿಲ್ಲೆಗೆ ಏನೆಲ್ಲಾ ಸಿಕ್ಕಿದೆ ಗೊತ್ತಾ ? ಇಲ್ಲಿದೆ ನೋಡಿ.

  • ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಕ್ಕೆ 10 ಕೋಟಿ. ರೂ ಅನುದಾನ.
  • ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆ ನಿರ್ಮಾಣ (ಶಿವಮೊಗ್ಗ, ಮೈಸೂರು ಹಾಗೂ ಕಲಬುರಗಿಗೆ ಸೇರಿ 202 ಕೋಟಿ ರೂ. ಅನುದಾನ).
  • 18 ಕೋಟಿ ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ ಆರಂಭ.
  • ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ತಾತ್ಕಾಲಿಕ ವಸತಿ ಗೃಹ ನಿರ್ಮಾಣ.
  • ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗಕ್ಕೆ 150 ಕೋಟಿ ರೂ. ಅನುದಾನ.
  • ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಲೈಟ್ ಕಾರ್ಗೋ ಟ್ರಾನ್ಸ್‌ಪೋರ್ಟ್ ಬೋಟ್ ಸೇವೆ ಆರಂಭ.
  • ಭಾರೀ ವಾಹನ ಚಾಲಕರ ತರಬೇತಿಗಾಗಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ (ಸಾಗರದಲ್ಲಿ).

Related Articles

LEAVE A REPLY

Please enter your comment!
Please enter your name here

Stay Connected

0FansLike
3,745FollowersFollow
0SubscribersSubscribe
- Advertisement -spot_img

Latest Articles

error: Content is protected !!