ರಾಜ್ಯ ಸರ್ಕಾರ ಮೊದಲು ವಿದ್ಯುತ್ ಸಮಸ್ಯೆ ಬಗೆಹರಿಸಲಿ ; ಬಿವೈಆರ್

0 50

ಶಿವಮೊಗ್ಗ : ರಾಜ್ಯ ವಿದ್ಯುತ್ ಅಭಾವ ಎದುರಿಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಇಲ್ಲವಾಗಿದೆ. ಇಂತಹ ಕಠಿಣ ಸಂದರ್ಭಗಳಲ್ಲಿ ರಾಜ್ಯ ಸರ್ಕಾರ ಅಕ್ಕಪಕ್ಕದ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.


ಮಲೆನಾಡು ಭಾಗದಲ್ಲಿ ನೆಟ್‌ವರ್ಕ್ ಸಮಸ್ಯೆ ನಿವಾರಣೆಗಾಗಿ ಡಿಸೆಂಬರ್ ಒಳಗಾಗಿ 100 ಟವರ್ ನಿರ್ಮಿಸಲಾಗುವುದು. ಈಗಾಗಲೇ ಕೇಂದ್ರ ಸರ್ಕಾರ ಇದಕ್ಕಾಗಿ 300 ಕೋಟಿ ರೂ. ನೀಡಿದೆ. ಶಿವಮೊಗ್ಗ ಕ್ಷೇತ್ರದ ಟವರ್‌ಗಳಿಗೆ 100 ಬ್ಯಾಟರಿ ಮಂಜೂರಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕಡೆ ಟವರ್ ನಿರ್ಮಿಸಲಾಗುವುದು ಎಂದರು.


ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಕ್ಷೇತ್ರಕ್ಕಾಗಿ ಏತ ನೀರಾವರಿ ಯೋಜನೆಯನ್ನು ತಂದಿದ್ದರು. ಶಿಕಾರಿಪುರ ತಾಲೂಕಿನಲ್ಲಿ ಈ ಯೋಜನೆ ಪೂರ್ಣಗೊಂಡಿದೆ. ನಿರಂತರ ವಿದ್ಯುತ್ ಪೂರೈಸಿದರೆ ಹಲವು ಕೆರೆಗಳಿಗೆ ನೀರು ತುಂಬಿಸಬಹುದು ಎಂದ ಅವರು, ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಆರಂಭಿಸಿತ್ತು. ಆದರೆ ರಾಜ್ಯ ಸರ್ಕಾರ ಅದನ್ನು ಕೈಬಿಟ್ಟು ಪ್ರತ್ಯೇಕ ಶಿಕ್ಷಣ ನೀತಿ ಅಳವಡಿಸುತ್ತಿದೆ. ಇದರಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಗ್ರಾಮೀಣ ಭಾಗದ ಮಕ್ಕಳು ತೊಂದರೆಗೊಳಗಾಗುತ್ತಾರೆ ಎಂದರು.

Leave A Reply

Your email address will not be published.

error: Content is protected !!