ರಾಷ್ಟ್ರದ್ರೋಹಿ ಸಂಘಟನೆಗಳ ಜೊತೆ ಕಾಂಗ್ರೆಸ್ ಶಾಮೀಲು ; ಕೆ.ಎಸ್. ಈಶ್ವರಪ್ಪ

0 12

ಶಿವಮೊಗ್ಗ: ರಾಷ್ಟ್ರದ್ರೋಹಿ ಸಂಘಟನೆಗಳಾದ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳೊಂದಿಗೆ ಜೊತೆಗೂಡಿ ನೇರ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ರಾಜ್ಯದ ಜನತೆ ಗಮನಿಸಬೇಕು ಹಾಗೂ ಕಾಂಗ್ರೆಸ್‌ಗೆ ಬೆಂಬಲಿಸದೆ ಮತದಾರರು ಬಿಜೆಪಿಗೆ ಬೆಂಬಲಿಸುವಂತೆ ಶಾಸಕ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರದ್ರೋಹಿ ಚಟುವಟಿಕೆ ಯಲ್ಲಿ ತೊಡಗಿದ್ದ ಪಿಎಫ್‌ಐ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದೆ. ಹರ್ಷನ ಕೊಲೆ ಮತ್ತು ಸ್ವಾತಂತ್ರ್ಯವೀರ ಸಾವರ್ಕರ್ ಅವರ ಭಾವಚಿತ್ರದ ಫ್ಲೆಕ್ಸ್ ಹರಿದ ಘಟನೆ ಹಾಗೂ ಕುಕ್ಕರ್ ಬ್ಲಾಸ್ಟ್ ಆರೋಪಿಗಳಿಗೆ ರಾಷ್ಟ್ರದ್ರೋಹಿ ಸಂಘಟ ನೆಗಳ ಜೊತೆ ಶಾಮೀಲಾಗಿರುವುದು ಸಾಬೀತಾಗಿದೆ. ಇಂತಹ ಸಂಘಟನೆಗಳ ಜೊತೆ ಕಾಂಗ್ರೆಸ್ ಕೈಜೋಡಿಸುತ್ತಿದೆ ಎಂದು ಅವರು ಆರೋಪಿಸಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮತ್ತೊಮ್ಮೆ ಪುನರುಚ್ಛರಿಸಿದೆ ಕೆ.ಎಸ್. ಈಶ್ವರಪ್ಪ, ಕೋಲಾರದಲ್ಲಿ 60 ಸಾವಿರಕ್ಕೂ ಹೆಚ್ಚು ದಲಿತ ಮತಗಳಿವೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮುಖಂಡರಾದ ಕೆ.ಹೆಚ್. ಮುನಿಯಪ್ಪ ಹಾಗೂ ಇನ್ನಿತರ ಮುಖಂಡರನ್ನು ಸೋಲಿಸಿರುವ ಸಿಟ್ಟನ್ನು ಅಲ್ಲಿನ ದಲಿತರು ಹಾಗೂ ಒಕ್ಕಲಿಗರು ಸಹ ಸಿದ್ದರಾಮಯ್ಯ ಅವರನ್ನು ಸೋಲಿಸಿ ತೀರಿಸಿ ಕೊಳ್ಳಲು ಕಾಯುತ್ತಿದ್ದಾರೆ. ವರ್ತೂರು ಪ್ರಕಾಶ್‌ರಿಗೆ ಜಿಲ್ಲಾ ಕುರುಬರ ಸಂಘದ ಬೆಂಬಲವಿದೆ. ಮುಸ್ಲಿಂರ ಮತಗಳನ್ನೇ ನೆಚ್ಚಿ ಕೊಂಡರೆ ಕೋಲಾರದಲ್ಲಿ ಸಿದ್ದರಾಮಯ್ಯ ಸೋಲುವುದು ಖಚಿತ ಎಂದರು.

ಮಾ.1ರಂದು ಆರಂಭಗೊಂಡ ಪಕ್ಷದ ವಿಜಯಸಂಕಲ್ಪ ಯಾತ್ರೆಗೆ ಅಭೂತಪೂರ್ವ ಹಾಗೂ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದೆ. ನಮ್ಮ ತಂಡದ ವಿಜಯ ಸಂಕಲ್ಪ ಯಾತ್ರೆ ಮಾ.1ರಂದು ಮಲೆಮಹಾದೇಶ್ವರ ಬೆಟ್ಟದಿಂದ ಆರಂಭವಾಗಿದ್ದು, ಈಗಾಗಲೇ 49 ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ಸಾಗಿದ್ದು ಈಗ ಶಿವಮೊಗ್ಗ ಜಿಲ್ಲೆಯಲ್ಲಿ ಯಾತ್ರೆ ಸಂಚರಿಸುತ್ತಿದೆ. ರಾಜ್ಯದ ನಾಲ್ಕು ದಿಕ್ಕುಗಳಿಂದಲೂ ಯಾತ್ರೆ ಆರಂಭವಾ ಗಿದ್ದು, ಮಾ.25ರಂದು ನಾಲ್ಕೂ ಯಾತ್ರೆಗಳು ದಾವಣಗೆರೆ ತಲುಪಲಿದ್ದು, ಅಂದು ಬೃಹತ್ ಸಮಾವೇಶ ನಡೆಯಲಿದೆ. ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು, ಸಿದ್ಧತೆಗಳು ಭರದಿಂದ ಸಾಗಿದೆ ಎಂದರು.

ಈ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯದ ಸಂಸದರು, ಸಚಿವರು, ಶಾಸಕರು ಹಾಗೂ ಮುಖಂ ಡರು ಭಾಗವಹಿಸಲಿದ್ದಾರೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ವಿಜಯ ಸಂಕಲ್ಪ ಯಾತ್ರೆಯ ಸಂಚಾಲಕ ಎಂ.ರಾಜೇಂದ್ರ, ಸಹ ಸಂಚಾಲಕ ಎಸ್. ದತ್ತಾತ್ರಿ, ಶಾಸಕರಾದ ಕೆ.ಬಿ. ಅಶೋಕ ನಾಯ್ಕ, ಎಸ್. ರುದ್ರೇಗೌಡರು, ಡಿ.ಎಸ್. ಅರುಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಮುಖಂಡರಾದ ಶಿವರಾಜ್, ಬಿ.ಕೆ. ಶ್ರೀನಾಥ್, ಕೆ.ವಿ. ಅಣ್ಣಪ್ಪ ಇತರರಿದ್ದರು.

Leave A Reply

Your email address will not be published.

error: Content is protected !!