ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಈ ವಸ್ತುಗಳನ್ನು ತರುವಂತಿಲ್ಲ !!

ಶಿವಮೊಗ್ಗ : ಫೆ. 27 ಸೋಮವಾರ ಶಿವಮೊಗ್ಗ ಜಿಲ್ಲೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದು, ಈ ಕಾರ್ಯಕ್ರದಲ್ಲಿ ಭಾಗವಹಿಸುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ತರಲು ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ನೀರಿನ ಬಾಟಲಿ, ಬ್ಯಾಗ್, ಪೇಪರ್ (ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ/ಶರ್ಟ್/ಕರವಸ್ತ್ರಗಳನ್ನು ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ.

ಕಾರ್ಯಕ್ರಮದ ದಿನದಂದು ಸುಗಮ ಸಂಚಾರ ಹಾಗೂ ಸಂಚಾರ ನಿಯಂತ್ರಣದ ಹಿನ್ನೆಲೆಯಲ್ಲಿ ಬದಲೀ ಮಾರ್ಗದ ವ್ಯವಸ್ಥೆ ಮಾಡಲಿದ್ದು, ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮತ್ತು ವಾಹನಗಳನ್ನು ಹೊರತು ಪಡಿಸಿ, ಕೆಎಸ್ಆರ್.ಟಿಸಿ /ಖಾಸಗಿ ಬಸ್‌ಗಳು ಗಳು ಮತ್ತು ಇತರೆ ಯಾವುದೇ ವಾಹಾನಗಳಲ್ಲಿ ಪ್ರಯಾಣಿಸುವ ಇತರೆ ಪ್ರಯಾಣಿಕರುಗಳು ಕಾರ್ಯಕ್ರಮ ಸ್ಥಳವಾದ ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯನ್ನು ಹೊರತುಪಡಿಸಿ, ಬದಲಿ ಮಾರ್ಗದಲ್ಲಿಯೇ ಪ್ರಯಾಣಿಸಬೇಕು ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.

Related Articles

1 COMMENT

LEAVE A REPLY

Please enter your comment!
Please enter your name here

Stay Connected

0FansLike
3,755FollowersFollow
0SubscribersSubscribe
- Advertisement -spot_img

Latest Articles

error: Content is protected !!