Shivamogga | ವ್ಯಾಪಾರ ನಡೆಸಲು ಕಾರ್ಮಿಕರ ಲೈಸೆನ್ಸ್ ಕಡ್ಡಾಯ

0 48

ಶಿವಮೊಗ್ಗ: ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅನುಸಾರ ಎಲ್ಲ ಅಂಗಡಿ, ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಹಾಸನ ಪ್ರಾದೇಶಿಕ ಕಚೇರಿ ಆಯುಕ್ತ ಸೋಮಣ್ಣ ಹೇಳಿದರು.
ಶಿವಮೊಗ್ಗ ನಗರದ ಸೂಡಾ ಕಚೇರಿಯ ಕಟ್ಟಡದಲ್ಲಿರುವ ಕಾರ್ಮಿಕ ಇಲಾಖೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.


ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಯಾವುದೇ ಕಾರ್ಮಿಕರು ಇಲ್ಲದಿದ್ದರೂ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವುದು, ಕಾರ್ಮಿಕರ ಸಂಖ್ಯೆಗೆ ಅನುಗುಣವಾಗಿ ಕಾನೂನುಬದ್ಧ ಸೌಲಭ್ಯ ಒದಗಿಸುವುದು ಕಾಯ್ದೆಯ ಉದ್ದೇಶ ಆಗಿದೆ ಎಂದು ತಿಳಿಸಿದರು.


ಎಲ್ಲ ಅಂಗಡಿ ಮಾಲೀಕರು ಹಾಗೂ ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕ ಇಲಾಖೆ ಜಾಲತಾಣದಲ್ಲಿ ನೋಂದಣಿ ಮಾಡಿಸಿ ಮಾಹಿತಿ ದಾಖಲಿಸಬೇಕು. ಅಂಗಡಿ ವಿಳಾಸ ಹಾಗೂ ಮಾಲೀಕರ ಗುರುತೀನ ಚೀಟಿ ಸೇರಿ ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು ಎಂದರು.


ನೋಂದಣಿ ಪ್ರಕ್ರಿಯೆಯಲ್ಲಿ ಸಮಸ್ಯೆ ಕಂಡುಬAದಲ್ಲಿ ಇಲಾಖೆ ಸಹಾಯವಾಣಿ 08029753059 ಅಥವಾ 155214 ಅಥವಾ ಹತ್ತಿರದ ಕಾರ್ಮಿಕ ಇಲಾಖೆ ಕಚೇರಿ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದು ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಕುರಿತು ಬಹುತೇಕ ಜನರಿಗೆ ಅರಿವಿಲ್ಲ. ಆದ್ದರಿಂದ ಕಾರ್ಮಿಕ ಇಲಾಖೆಯ ಕಾಯ್ದೆಯಡಿಯಲ್ಲಿ ಎಲ್ಲ ಅಂಗಡಿ ಮಾಲೀಕರು ಹಾಗೂ ವಾಣಿಜ್ಯ ಸಂಸ್ಥೆಗಳು ಕಾರ್ಮಿಕರ ಮಾಹಿತಿ ನೀಡಿ ನೋಂದಣಿ ಮಾಡಿಸಬೇಕು ಎಂದು ಹೇಳಿದರು.


ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಜಾಗೃತಿ ಮೇಳ ಆಯೋಜಿಸಿ ಹೆಚ್ಚಿನ ಸಂಸ್ಥೆಗಳ ನೋಂದಣಿಗೆ ಅನುಕೂಲವಾಗುವಂತೆ ಸಹಕರಿಸಲಾಗುವುದು. ಶಿವಮೊಗ್ಗದ ಅಂಗಡಿ ಮಾಲೀಕರು ಹಾಗೂ ವಾಣಿಜ್ಯ ಸಂಸ್ಥೆಗಳು ಭಾಗವಹಿಸಬೇಕು ಎಂದು ತಿಳಿಸಿದರು.


ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕರಾದ ಪ್ರದೀಪ್ ಯಲಿ, ಕಾರ್ಮಿಕ ನೀರಿಕ್ಷಕರಾದ ಭೀಮೇಶ್, ಸುಖೀತಾ, ಕಾರ್ಮಿಕ ಅಧಿಕಾರಿ ಸುಮಾ ದೇವರಾಜ್, ಮಂಜುನಾಥ್, ಎನ್.ಎಸ್.ರಮೇಶ್, ಸುರೇಶ್ ಕುಮಾರ್, ವಿಜಯ ದಿನಕರ ಹಾಗೂ ವಾಣಿಜ್ಯ ಉದ್ಯಮಿಗಳು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!