ಶತಮಾನೋತ್ಸವ ಆಚರಿಸುತ್ತಿರುವ ಹೊಸನಗರದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ

0 418

ಹೊಸನಗರ : ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ಫೆ. 25 ಮತ್ತು 26ರ ಭಾನುವಾರ ಹಾಗೂ ಸೋಮವಾರ ನೆಹರು ಮೈದಾನದಲ್ಲಿ ವರ್ಣ ರಂಜಿತವಾಗಿ ಶತಮಾನೋತ್ಸವ ಆಚರಿಸಲಿದೆ.

ಭಾನುವಾರ ಬೆಳಗ್ಗೆ 9:30ಕ್ಕೆ ತಹಸೀಲ್ದಾರ್ ರಶ್ಮಿ ಹಾಲೇಶ್, ಎಸ್‌ಡಿಎಂಸಿ ಅಧ್ಯಕ್ಷ ಕೆ.ಕೆ ಅಶ್ವಿನಿ ಕುಮಾರ್ ಅಧ್ಯಕ್ಷತೆಯಲ್ಲಿ ಮಕ್ಕಳ ಸಂತೆ ಉದ್ಘಾಟಿಸುವ ಮೂಲಕ ಎರಡು ದಿನಗಳ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ.

ಸಂಜೆ 5:30ಕ್ಕೆ ತಾಲೂಕಿನ ವಿವಿಧ ಸರ್ಕಾರಿ ಶಾಲಾ ಮಕ್ಕಳು ಹಳೆಯ ವಿದ್ಯಾರ್ಥಿಗಳ ಮತ್ತು ಪೋಷಕರಿಂದ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ವೈ. ನರೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್ ಕೃಷ್ಣಮೂರ್ತಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಸ್.ಜಿ ಮಾರುತಿ, ಪಟ್ಟಣ ಪಂಚಾಯತಿ ಸದಸ್ಯರುಗಳು ಶಿಕ್ಷಣ ಇಲಾಖೆಯ ವಿವಿಧ ಸ್ಥರಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ

ಸೋಮವಾರ ಬೆಳಗ್ಗೆ 10 ಗಂಟೆಗೆ ಸ್ವಚ್ಛತಾ ಸಂದೇಶ ಸಾರುವ ಮಕ್ಕಳ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದ್ದು ಮಧ್ಯಾಹ್ನ 12:30ಕ್ಕೆ ಮಾತೃ ಭೋಜನ ಹಾಗೂ ಮಿತ್ರ ಭೋಜನ ಹಮ್ಮಿಕೊಳ್ಳಲಾಗಿದೆ.

ಸಂಜೆ 5:30ಕ್ಕೆ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಶತಮಾನೋತ್ಸವದ ಸವಿನೆನಪಿಗಾಗಿ ವಿನೂತನವಾಗಿ ನಿರ್ಮಿಸಿರುವ ಮುಖ್ಯ ಪ್ರವೇಶ ದ್ವಾರವನ್ನು ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದ ನಂತರ ಸಮಾರೋಪ ಸಮಾರಂಭ ಶಾಸಕ ಬೇಳೂರು ಗೋಪಾಲಕೃಷ್ಣ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು ಹರಿಹರಪುರ ಗೌರಿಗದ್ದೆ ಅವಧೂತ ವಿನಯ್ ಗುರೂಜಿ, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಆಶೀರ್ವಚನ ನೀಡಲಿದ್ದಾರೆ.

ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಪ್ರತಿಭಾ ಪುರಸ್ಕಾರ ನಡೆಸಲಿದ್ದು, ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ರವರು ಸಾಧಕರನ್ನು ಸನ್ಮಾನಿಸಲಿದ್ದಾರೆ.

Leave A Reply

Your email address will not be published.

error: Content is protected !!