ಶಿಕ್ಷಕರ ನೇಮಕಾತಿ ; ಸ್ಥಳ ಆಯ್ಕೆ ಪ್ರಕ್ರಿಯೆ

0 146


ಶಿವಮೊಗ್ಗ :‌2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಚನ್ಯಾಯಾಲಯದ ರಿಟ್ ಅಪೀಲು ದಿ: 12-10-2023 ರ ವಿಭಾಗೀಯ ಪೀಠದ ತೀರ್ಪಿನಂತೆ ದಿನಾಂಕ: 08-03-2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಲಿಂಗ್‍ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ದಿ: 19-10-2023 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾಗಿದೆ.


ವೆಬ್‌ಸೈಟ್‌ನಲ್ಲಿ ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಲಿಂಗ್‍ನ ದಿನಾಂಕ: 21-10-2023 ರಂದು ಕರ್ನಾಟಕ ಪಬ್ಲಿಕ್ ಶಾಲೆ(ಕೆಇಎಸ್ ಶಾಲೆ) ಮೀನಾಕ್ಷಿ ಭವನದ ಹತ್ತಿರ, ಬಿ.ಹೆಚ್.ರಸ್ತೆ ಶಿವಮೊಗ್ಗ ಇಲ್ಲಿ ಬೆಳಿಗ್ಗೆ 10 ರಿಂದ ಕೌನ್ಸಲಿಂಗ್ ಮುಗಿಯುವವರೆಗೆ ಇಲಾಖಾ ವೆಬ್‌ಸೈಟ್‌ನಲ್ಲಿರುವಂತೆ ಭಾವಚಿತ್ರವಿರುವ ಗುರುತಿನ ಚೀಟಿ & ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.


ಹೆಚ್ಚಿನ ವಿವರಗಳಿಗೆ ಡಿಡಿಪಿಐ ಸಿ.ಆರ್ ಪರಮೇಶ್ವರಪ್ಪ ಮೊ.ಸಂ: 9448999351, ಶಿಕ್ಷಣಾಧಿಕಾರಿ ಲೋಕೇಶಪ್ಪ ಕೆ.ಬಿ, ಮೊ.ಸಂ: 9448940321, ಅಧೀಕ್ಷಕ ಸಂಪತ್ ಕುಮಾರ್ 9945410865, ವಿಷಯ ನಿರ್ವಾಹಕ ಗಣೇಶ 9035348950 ನ್ನು ಸಂಪರ್ಕಿಸಬಹುದೆಂದು ಡಿಡಿಪಿಐ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!