ಶಿವಮೊಗ್ಗದ ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನ !

0 2

ಶಿವಮೊಗ್ಗ : ಶಿವಮೊಗ್ಗದ ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಸೀತಾಬಾಯಿ (50) ಆತ್ಮಹತ್ಯೆಗೆ ಮುಂದಾದವರು ಮಹಿಳೆಯಾಗಿದ್ದು, ಇದೇ ಜೂನ್ 17ರಂದು ಶಿವಮೊಗ್ಗದ ವಿಜಯನಗರದಲ್ಲಿ ಕಮಲಮ್ಮ ಎಂಬುವರನ್ನು ಕೊಲೆ ಮಾಡಲಾಗಿತ್ತು, ಈ ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ನಾಪತ್ತೆಯಾಗಿದ್ದ, ಕಮಲಮ್ಮ ನವರನ್ನು ಕೊಲೆಗೈದು ಸುಮಾರು 35 ಲಕ್ಷ ಹಣವನ್ನು ದೋಚಲಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆಗಾರನ ಸುಳಿವು ಪಡೆದ ಶಿವಮೊಗ್ಗದ ತುಂಗಾನಗರ ಪೊಲೀಸರು ಆರೋಪಿ ಹನುಮಂತ ನಾಯ್ಕ ನ ಬೆನ್ನು ಬಿದ್ದಿದ್ದರು.

ಸೀತಾಬಾಯಿ

ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮಗ ಹನುಮಂತ ನಾಯ್ಕ, ಪತಿ ರೂಪ್ಲಾನಾಯ್ಕ ಇಬ್ಬರು ಮನೆ ಬಿಟ್ಟು ಪರಾರಿಯಾಗಿದ್ದರು, ಇದರಿಂದ ಮನನೊಂದ ಸೀತಾಬಾಯಿ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಯತ್ನಿಸಿದ ಸೀತಾಬಾಯಿಯನ್ನು ಸಂಬಂಧಿಕರು ರಕ್ಷಿಸಿ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಐಸಿಯು ನಲ್ಲಿ ದಾಖಲಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಸೀತಾಬಾಯಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕನ ಕೆಲಸ ಕೊಟ್ಟ ಮನೆ ಮಾಲೀಕನ ಪತ್ನಿಯನ್ನು ತನ್ನ ಮಗ ಕೊಲೆ ಮಾಡಿದ್ದಕ್ಕೆ ಸೀತಾಬಾಯಿ ಬೇಸರಗೊಂಡಿದ್ದರು.

Leave A Reply

Your email address will not be published.

error: Content is protected !!