ಶಿವಮೊಗ್ಗ : ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬೇಟೆ ಮುಂದುವರೆಸಿರುವ ಚುನಾವಣಾ ಆಯೋಗ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ದಾಖಲೆ ಇಲ್ಲದ ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನ, ನಗದನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 30.64 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ 27.60 ಲಕ್ಷ ಹಣ, ಶಿಕಾರಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 1.79 ಲಕ್ಷ ನಗದು, ಭದ್ರಾವತಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.25 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ಮತ್ತೊಂದೆಡೆ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಸುಮಾರು 5.83 ಕೋಟಿ ಮೌಲ್ಯದ 9 ಕೆಜಿ 565 ಗ್ರಾಂ ಚಿನ್ನವನ್ನ ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.