ಶಿವಮೊಗ್ಗ : ಜಿಲ್ಲಾ ಪಂಚಾಯಿತಿಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಉನ್ನತ ಶಿಕ್ಷಣ ಇಲಾಖೆಯ ಡೆಪ್ಯೂಟಿ ಸೆಕ್ರೆಟರಿ ಆಗಿದ್ದ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈವರೆಗೂ ಎನ್.ಡಿ.ಪ್ರಕಾಶ್ ಅವರು ಜಿಲ್ಲಾಪಂಚಾಯಿತಿ ಸಿಇಒ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು.