ಶಿವಮೊಗ್ಗ ದಸರಾ ; ಅ.20ರಿಂದ ನಾಲ್ಕು ದಿನಗಳ ಕಾಲ ವೈಭವದಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಚರಣೆ

0 91

ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಆಚರಿಸಲಾಗುತ್ತಿರುವ ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ದಸರಾ ಸಮಿತಿ ವತಿಯಿಂದ ಅ.20ರಿಂದ ನಾಲ್ಕು ದಿನಗಳ ಕಾಲ ವೈಭವದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿದೆ ಎಂದು ಸಾಂಸ್ಕೃತಿಕ ದಸರಾ ಸಮಿತಿ ಅಧ್ಯಕ್ಷ ಇ. ವಿಶ್ವಾಸ್ ತಿಳಿಸಿದರು.


ಅವರು ಇಂದು ಪಾಲಿಕೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅ.20ರ ಸಂಜೆ 5ರಿಂದ ರಾತ್ರಿ 9-30ರ ವರೆಗೆ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್ ಸುಂದರರಾಜ್ ನೇತೃತ್ವದಲ್ಲಿ ವಚನ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ಕವಿಗೋಷ್ಠಿ ನಡೆಯಲಿದ್ದು, ಖ್ಯಾತ ವಕೀಲ ಎಂ.ಆರ್. ಸತ್ಯನಾರಾಯಣ ಉದ್ಘಾಟಿಸಲಿದ್ದಾರೆ ಎಂದರು.


ಮುಖ್ಯ ಅತಿಥಿಯಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಆಯುಕ್ತ ಕೆ. ಮಾಯಣ್ಣ ಗೌಡ, ಪಾಲಿಕೆ ಸದಸ್ಯರಾದ ಎಸ್. ಜ್ಞಾನೇಶ್ವರ್, ಸುನೀತಾ ಅಣ್ಣಪ್ಪ, ರಾಹುಲ್ ಪಿ. ಬಿದರೆ, ಕಲ್ಪನಾ ರಮೇಶ್ ಹಾಗೂ ಇನ್ನಿತರರು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮೇಯರ್ ಎಸ್. ಶಿವಕುಮಾರ್ ವಹಿಸಲಿದ್ದಾರೆ ಎಂದರು.


ಅ.22ರ ಸಂಜೆ 5-30ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ನಾಟ್ಯ ವೈವಿಧ್ಯ ಹಾಗೂ ಸಂಗೀತ ಸಂಭ್ರಮ ಕಾರ್ಯಕ್ರಮವನ್ನು ಖ್ಯಾತ ಚಿತ್ರನಟ ಅಜೇಯ್ ರಾವ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪರ‍್ಯಾ ನಾಯ್ಕ, ಎಸ್. ರುದ್ರೇಗೌಡ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್, ಆಯುಕ್ತ ಕೆ. ಮಾಯಣ್ಣ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್ ಆಗಮಿಸಲಿದ್ದು, ಸಮಿತಿಯ ಅಧ್ಯಕ್ಷ ಇ. ವಿಶ್ವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ.


ನಂತರ ಪ್ರಹ್ಲಾದ್ ದೀಕ್ಷಿತ್ ನೇತೃತ್ವದಲ್ಲಿ ರಾಗರಂಜಿನಿ ತಂಡದವರಿಂದ ಸಂಗೀತ ಸಂಭ್ರಮ ಹಾಗೂ ಸ್ಥಳೀಯ ನೃತ್ಯ ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದರು.
ಅ.23ರ ಸಂಜೆ 5-30ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಸಂಗೀತ ಹಾಗೂ ಜಾನಪದ ವೈಭವ ಕಾರ್ಯಕ್ರಮವನ್ನು ಖ್ಯಾತ ಚಿತ್ರನಟ ವಿಜಯರಾಘವೇಂದ್ರ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್ ಚನ್ನಬಸಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಬಿ.ವೈ. ವಿಜಯೇಂದ್ರ, ಡಿ.ಎಸ್. ಅರುಣ್, ಆಯುಕ್ತ ಕೆ.ಮಾಯಣ್ಣ ಗೌಡ, ಮಾಜಿ ಶಾಸಕ ಕೆ.ಬಿ. ಅಶೋಕ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹಾಗೂ ಇನ್ನಿತರರು ಆಗಮಿಸಲಿದ್ದಾರೆ ಎಂದರು.


ನಂತರ ಜೋಗಿ ಸುನೀತಾ, ಮಂಗಳಾ ರವಿ ಹಾಗೂ ಕಲಾತ್ಮಕ ತಂಡದವರಿಂದ ಸಂಗೀತ ವೈಭವ ಮತ್ತು ನಾಗರಾಜ್‌ಮೂರ್ತಿ ತಂಡದವರಿಂದ ಜಾನಪದ ವೈಭವ ನಡೆಯಲಿದೆ ಎಂದರು.
ಅದೇ ದಿನ ಸಂಜೆ 5ರಿಂದ ರಾತ್ರಿ 10 ಗಂಟೆಯವರೆಗೆ ಕುವೆಂಪು ರಂಗಮಂದಿರದಲ್ಲಿ ಯಕ್ಷ ದಸರಾ ನಡೆಯಲಿದ್ದು, ಶಿವಮೊಗ್ಗದ ಯಕ್ಷ ಸಂವರ್ಧನಾದ ಕಾರ್ಯದರ್ಶಿ ಶ್ರೀನಿವಾಸ ಆಚಾರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಎಸ್. ಶಿವಕುಮಾರ್ ಹಾಗೂ ಪಾಲಿಕೆ ಸದಸ್ಯರ ಭಾಗವಹಿಸಲಿದ್ದಾರೆ.
ನಂತರ ಯಕ್ಷ ಸಂವರ್ಧನಾ ತಂಡದವರಿಂದ ಲಕ್ಷ್ಮಿ ವಿವಾಹ ಹಾಗೂ ಮಹಾ ಗಣಪತಿ ಯಕ್ಷ ಕಲಾ ಬಳಗದವರಿಂದ ಬಲರಾಮ ಗರ್ವಭಂಗ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದರು.


ಅ.24ರಂದು ಸಂಜೆ 5 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಶಂಕರ್ ಶ್ಯಾನಭಾಗ್ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಪಾಲಿಕೆ ಸದಸ್ಯೆ ಸುನೀತಾ ಅಣ್ಣಪ್ಪ, ಸಮಿತಿಯ ಸದಸ್ಯ ಕಾರ್ಯದರ್ಶಿ ಸಿ.ಆರ್.ಸಿದ್ದಪ್ಪ ಉಪಸ್ಥಿತರಿದ್ದರು.

ಚಿತ್ರಕಲೆ ಮತ್ತು ಛಾಯಾಚಿತ್ರ ದಸರಾಕ್ಕೆ ಚಾಲನೆ :

ಶಿವಮೊಗ್ಗ: ಪಾಲಿಕೆಯಿಂದ ಆಚರಿಸಲಾಗುತ್ತಿರುವ ದಸರಾ ಮಹೋತ್ಸವದಲ್ಲಿ ಕಲಾ ದಸರಾ ಸಮಿತಿಯಿಂದ ಶಿವಪ್ಪ ನಾಯಕ ಅರಮನೆಯಲ್ಲಿ ಇಂದು ಹಮ್ಮಿಕೊಂಡಿದ್ದ ಛಾಯಾಚಿತ್ರ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಶಿವಪ್ಪ ನಾಯಕ ಅರಮನೆ ಸಹಾಯಕ ನಿರ್ದೇಶಕ ಡಾ.ಆರ್. ತೇಜೇಶ್ವರ್, ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್ ಎಸ್.ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಸದಸ್ಯರಾದ ಇ. ವಿಶ್ವಾಸ್, ಪ್ರಭಾಕರ್, ಸುರೇಖಾ ಮುರಳೀಧರ, ಭಾನುಮತ ವಿನೋದ್‌ಕುಮಾರ್ ಶೇಟ್, ಕಲ್ಪನಾ ರಮೇಶ್ ಇನ್ನಿತರರು ಹಾಜರಿದ್ದರು.

Leave A Reply

Your email address will not be published.

error: Content is protected !!