ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ನಿಶ್ಚಿತ ; ಹೆಚ್.ಸಿ. ಯೋಗೀಶ್

0 1

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್.ಸಿ. ಯೋಗೀಶ್ ಇಂದು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.


ರಾಮಣ್ಣ ಶ್ರೇಷ್ಠಿ ಪಾರ್ಕಿನ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಅಪಾರ ಬೆಂಬಲಿಗರೊಂದಿಗೆ ದೇವಸ್ಥಾನದಿಂದ
ಗಾಂಧಿ ಬಜಾರ್, ಶಿವಪ್ಪನಾಯಕ ಪುತ್ಥಳಿ, ನೆಹರು ರಸ್ತೆ, ಗೋಪಿ ಸರ್ಕಲ್, ಕಸ್ತೂರಬಾ ಕಾಲೇಜು ರಸ್ತೆ ಮೂಲಕ ಸಾಗಿ ಮಹಾನಗರ ಪಾಲಿಕೆಯಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.


ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ಗ್ಯಾರಂಟಿಗಳನ್ನು ಘೋಷಿಸಿದೆ. ಬಿಜೆಪಿ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಹೊಸತನ ಬಯಸಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸದಲಿದ್ದಾರೆ. ಶಿವಮೊಗ್ಗ ನಗರವೂ ಸೇರಿದಂತೆ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುತ್ತದೆ ಎಂದರು.

Leave A Reply

Your email address will not be published.

error: Content is protected !!