ಶಿವಮೊಗ್ಗ ಪೊಲೀಸರಿಂದ ಚಲನಚಿತ್ರ ನಟಿ ಬಂಧನ ; ಕಾರಣವೇನು ?
ಶಿವಮೊಗ್ಗ : ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಿನಿಮಾ ನಟಿಯೊಬ್ಬಳ ವಿರುದ್ಧ ಶಿವಮೊಗ್ಗ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನಲೆಯಲ್ಲಿ ವಿನೋಬನಗರ ಠಾಣೆ ಪೊಲೀಸರು ನಟಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ಉಷಾಳನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು, ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್ ಎಂಬಾತ ವಂಚನೆ ದೂರು ನೀಡಿದ್ದರು. ತನ್ನಿಂದ ಹಣ ಪಡೆದು ಉಷಾ ಮರಳಿಸಿಲ್ಲ ಎಂದು ಆರೋಪಿಸಿ ಶರವಣನ್ ಶಿವಮೊಗ್ಗ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆಗೆ ನಟಿ ಉಷಾ ಹಾಜರಾಗದ ಹಿನ್ನೆಲೆ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿತ್ತು.

ಸಲಗ ಸಿನಿಮಾದಲ್ಲಿ ಸಹ ಕಲಾವಿದೆಯಾಗಿ ಉಷಾ ಅಭಿನಯಿಸಿದ್ದರು. ಕಿರುತೆರೆ ಧಾರವಾಹಿಗಳಲ್ಲು ನಟಿಸುತ್ತಿದ್ದಾರೆ. ಶರವಣನ್ ಕೂಡ ಧಾರವಾಹಿಗಳಲ್ಲಿ ನಟಿಸಿದ್ದರು.