ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಿ ; ಜೆಡಿಎಸ್ ಆಗ್ರಹ

0 37

ರಿಪ್ಪನ್‌ಪೇಟೆ: ಇದೇ 27 ರಂದು ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ.


ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ರಾಷ್ಟ್ರಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರು. ಆ ಕಾರಣ ಅವರ ಹೆಸರಿಡುವುದು ಸೂಕ್ತ ಸಮಯೋಚಿತ ನಿರ್ಧಾರವಾಗಿದೆ.
ಅವರೇ ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬಂತೆ ಶಿವಮೊಗ್ಗ ವಿಮಾನ ನಿಲ್ದಾಣ ಸಾರ್ವಜನಿಕರ ಉಪಯುಕ್ತ ಸಂಚಾರ ವ್ಯವಸ್ಥೆಗೆ ಸಾಕ್ಷಿಯಾಗಲಿದೆ ಎಂದು ವರ್ಣಿಸಿ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುಲಾಗಿದೆ ಎಂದರು.

Leave A Reply

Your email address will not be published.

error: Content is protected !!