ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

0 179

ಹೊಸನಗರ : 2023-24ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ತಾಲ್ಲೂಕಿನ ಆಸಕ್ತ ರೈತರಿಂದ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸನಗರ ಸಹಾಯಕ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ರೈತರು ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿ ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ ಕೃಷಿ ಯಂತ್ರೋಪಕರಣ ಅಭಿವೃದ್ಧಿ, ನೀರಿನ ಸಮರ್ಥ ಬಳಕೆ, ಇನ್ನಿತರೆ ಯಾವುದೇ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರಬೇಕು.

ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಹಾಗೂ ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟಿಕ್ ಹಸಿರುಮಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ ಹಾಗೂ ನಮೂನೆಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿಬಹುದು. ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ.

Leave A Reply

Your email address will not be published.

error: Content is protected !!