ಸರ್ಕಾರ ಮತ್ತು ಪೋಷಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ; ಕಿಮ್ಮನೆ ರತ್ನಾಕರ್

0 3

ಶಿವಮೊಗ್ಗ: ಸರ್ಕಾರ ಮತ್ತು ಪೋಷಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರಗಳು ಎಲ್ ಕೆಜಿ ಯಿಂದ ಪಿಯುಸಿ ವರೆಗೆ ಉಚಿತ ಶಿಕ್ಷಣ ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.


ಅವರು ಬುಧವಾರ ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ವೇದಿಕೆಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಒಕ್ಕಲಿಗರ ಯುವ ಸಮಾವೇಶ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕ ಗಳಿಸಿರುವ ಒಕ್ಕಲಿಗ ಸಮಾಜದ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾ ರ್ಥಿಗಳಿಗೆ ಪ್ರೋತ್ಸಾಹ ಧನ ವಿತ ರಣೆ, ಒಕ್ಕಲಿಗೆ ಸಮುದಾಯದ ಸಾಧಕರಿಗೆ ಸನ್ಮಾನ, ವಿಶೇಷಚೇತ ನರಿಗೆ ವ್ಹೀಲ್ ಚೇರ್, ವಾಕರ್ ಹಾಗೂ ವಾಕ್ ಸ್ಟಿಕ್ ವಿತರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.


ದೇಶದಲ್ಲಿ 30 ಕೋಟಿಗೂ ಹೆಚ್ಚು ಜನ ಕಡು ಬಡತನದಲ್ಲಿದ್ದಾರೆ. ಅನೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತ ರಾಗಿದ್ದಾರೆ. ಇಂತಹ ಕಾರ್ಯಕ್ರಮ ಗಳಿಂದ ಅವರ ಶಿಕ್ಷಣಕ್ಕೆ ಅನುಕೂಲ ವಾಗುತ್ತದೆ. ಈ ದೇಶದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಯಾವುದೇ ಖಾಸಗಿ ಶಾಲಾ ಕಾಲೇಜುಗಳಿಗೆ ಕಡಿಮೆಯಾಗದ ರೀತಿಯಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರಗಳು ಉಚಿತ ಸೇವೆ ನೀಡಬೇಕು. ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮೂವರೂ ಒಟ್ಟಾಗಿ ಹೊಂದಾಣಿಕೆ ಯಾದಾಗ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಸಾಧ್ಯ ಎಂದರು.


ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಪ್ರತಿಭಾ ಪುರಸ್ಕಾರದ ಮೂಲಕ ವಿದ್ಯಾರ್ಥಿಗಳಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸಿ ದಾಗ ಮಾತ್ರ ಸಾಧನೆಗೆ ಸ್ಫೂರ್ತಿಯಾಗುತ್ತದೆ. ಹಿಂದೆ ವಿದ್ಯೆ ಎನ್ನು ವುದು ಮೇಲ್ಜಾತಿಯವರ ಸೊತ್ತು ಎನ್ನುವಂತಿತ್ತು. ಆದರೆ ಈಗ ಸಾಧಕರ ಸೊತ್ತಾಗಿದೆ ಎಂದರು.


ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿರಿಬೈಲು ಧರ್ಮೇಶ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಕೆ. ಚೇತನ್, ಶಾಸಕ ಎಸ್.ಎಲ್. ಭೋಜೇಗೌಡ, ಜಿಲ್ಲ ಒಕ್ಕಲಿಗರ ಸಂಘದ ಅಧ್ಯಕ್ಷ ಆದಿಮೂರ್ತಿ, ಪ್ರಮುಖರಾದ ಕೆ.ಎನ್. ರಾಮಕೃಷ್ಣ, ಉಂಬ್ಳೇಬೈಲು ಮೋಹನ್, ವಿಜಯ ಕುಮಾರ್, ಕಡಿದಾಳ್ ಗೋಪಾಲ್, ಸುವರ್ಣ ಶಂಕರ್, ಯಮುನಾ ರಂಗೇಗೌಡ, ರಮೇಶ್ ಹೆಗಡೆ, ಗುರುರಾಜ ಗೌಡ, ಶೋಭಾ ವೆಂಕಟರಮಣ, ಸುನಿಲ್ ಗೌಡ, ರಘುಗೌಡ, ಪ್ರಜ್ವಲ್ ಗೌಡ ಸೇರಿದಂತೆ ಹಲವರಿದ್ದರು.

Leave A Reply

Your email address will not be published.

error: Content is protected !!