ಸಾಲಭಾದೆಯಿಂದ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ !
ರಿಪ್ಪನ್‌ಪೇಟೆ: ಸಾಲಭಾದೆಯಿಂದಾಗಿ ಬೇಸತ್ತು ವಿಷ ಸೇವಿಸಿ ರೈತನೋರ್ವ ಆತ್ಯಹತ್ಯೆ ಮಾಡಿಕೊಂಡ ಘಟನೆ ಸಮೀಪದ ಬಾಳೂರು ಗ್ರಾಮದ ಕೋಡ್ರಿ ಎಂಬಲ್ಲಿ ನಡೆದಿದೆ.
ಕೃಷ್ಣಮೂರ್ತಿ (54) ಆತ್ಮಹತ್ಯೆ ಮಾಡಿಕೊಂಡ ರೈತ. ಭಾನುವಾರ ಬೆಳಗ್ಗೆ ಕ್ರಿಮಿನಾಶಕವನ್ನು ಸೇವಿಸಿದ್ದು ತಕ್ಷಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕೃಷಿ ಕೆಲಸಕ್ಕಾಗಿ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್‌ನಲ್ಲಿ ಸುಮಾರು 2.50 ಲಕ್ಷ ರೂ. ಸಾಲ, ಸ್ವಸಹಾಯ ಸಂಘದಲ್ಲಿ 60 ಸಾವಿರ ರೂ. ಕೈಗಡ ಸಾಲವಾಗಿ ಸುಮಾರು 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಮಳೆಯಿಲ್ಲದೆ ಭತ್ತ, ಕಬ್ಬು, ಶುಂಠಿ, ಅಡಿಕೆ ಬೆಳೆ ಬೆಳೆಯು ಈ ವರ್ಷ ನಾಶವಾಗಿದ್ದು ಕೃಷಿಗಾಗಿ ಮಾಡಿದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಮೃತನ ಕುಟುಂಬಸ್ಥರು ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.