ಸಿಗಂದೂರು ಸೇತುವೆ ಮೇಲಿಂದ ಬಿದ್ದು ಕಾರ್ಮಿಕ ಸಾವು !

0 1,117

ಸಾಗರ: ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕನೋರ್ವ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್ (42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕಾರ್ಮಿಕ ಮೃತಪಟ್ಟಿದ್ದಾನೆ.

ಮೃತ ಕಾರ್ಮಿಕನ ಸಹೋದರ ತಾಜಿನ್ ಅಲಿ ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave A Reply

Your email address will not be published.

error: Content is protected !!