ಹೊಸನಗರದಲ್ಲಿ ಅದ್ದೂರಿ ದಸರಾ ಆಚರಣೆಗೆ ಸಿದ್ದತೆ ; ಹಾಲಗದ್ದೆ ಉಮೇಶ್

0 281

ಹೊಸನಗರ: ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಸಂಘ ಸಂಸ್ಥೆ, ಇಲಾಖೆಗಳ ಸಹಯೋಗದಲ್ಲಿ ಈ ಬಾರಿ ಅದ್ದೂರಿಯಾಗಿ ದಸರಾ ಮಹೋತ್ಸವ ಆಚರಿಸಲು ಯೋಜನೆ ರೂಪಿಸಲಾಗಿದೆ ಎಂದು ದಸರಾ ಆಚರಣಾ ಸಮಿತಿಯ ಅಧ್ಯಕ್ಷ, ಪಟ್ಟಣ ಪಂಚಾಯಿತಿ ಸದಸ್ಯ ಹಾಲಗದ್ದೆ ಉಮೇಶ್ ತಿಳಿಸಿದ್ದಾರೆ.


ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಅ.24ರಂದು ದಸರಾ ಮಹೋತ್ಸವ ನಡೆಯಲಿದೆ. ಇದರ ಪ್ರಯುಕ್ತ ಮಹಿಳೆಯರಿಗಾಗಿ ರಂಗೋಲಿ, ಚಿತ್ರಕಲೆ, ಹಗ್ಗ ಜಗ್ಗಾಟ, ಮ್ಯೂಜಿಕಲ್ ಚೇರ್, ಸಾಂಪ್ರದಾಯಿಕ ಉಡುಪು, ಸ್ಲೋ ವಾಕಿಂಗ್, ಸ್ಲೋ ಸೈಕ್ಲಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.


ಅಕ್ಟೋಬರ್ 24ರಂದು ಮಧ್ಯಾಹ್ನ 3 ಗಂಟೆಗೆ ಜನಾರ್ಧನ ದೇವಸ್ಥಾನದಿಂದ ಹೊರಡುವ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಕಲಾತಂಡಗಳು ಇದರಲ್ಲಿ ಭಾಗವಹಿಸಲಿವೆ. ಸಾಂಸ್ಕೃತಿಕ ಕಾರ‍್ಯಕ್ರಮದ ಬಳಿಕ ರಾಮೇಶ್ವರ ದೇವಸ್ಥಾನದ ಬಳಿ ಬನ್ನಿ ಮಂಟಪದಲ್ಲಿ ಬನ್ನಿ ಕಡಿಯುವ ವಿವಿಧಾ ಸಂಪ್ರದಾಯದಂತೆ ಹೊಸನಗರದ ತಹಶೀಲ್ದಾರ್ ರಾಕೇಶ್‌ರವರು ಬನ್ನಿ ಕಾರ್ಯ ನೆರವೇರಿಸಲಿದ್ದಾರೆ.

ನಾಡ ಹಬ್ಬಗಳ ಸಮಿತಿಯ ಸದಸ್ಯರುಗಳಾದ ಶ್ರೀನಿವಾಸ್ ಕಾಮತ್, ಶ್ರೀಧರ ಉಡುಪ. ರಾಜಮೂರ್ತಿ, ವರ್ತಕರ ಸಮಗದ ಅಧ್ಯಕ್ಷ ವಿಜೇಂದ್ರ ಶೇಟ್, ಸೇರಿದಂದ ಕಂದಾಯ ಇಲಾಖೆಯ ಸಿಬ್ಬಂದಿಗಳು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಮಾರುತಿ ಹಾಗೂ ಸಿಬ್ಬಂದಿಗಳು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್ ಸೇರಿದಂತೆ ತಾಲ್ಲೂಕಿನ ಎಲ್ಲ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಾಡಹಬ್ಬವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

Leave A Reply

Your email address will not be published.

error: Content is protected !!