ಹೊಸನಗರದ ಮೇಘನಾಗೆ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ

0 1,239


ಹೊಸನಗರ: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪಟ್ಟಣದ ನಿವಾಸಿ ಬಿ.ಮೇಘನಾ ಚಿನ್ನದ ಪದಕ ಗಳಿಸಿದ್ದಾರೆ.

76 ಕೆ.ಜಿ.ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಸಾಧನೆ ಮಾಡಿದ್ದಾರೆ. ಇವರು ಇಲ್ಲಿನ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಕ್ಷೇತ್ರಾಧಿಕಾರಿ ಕರಿಬಸಮ್ಮ ಹಾಗೂ ಬಾಲಕೃಷ್ಣರವರ ಪುತ್ರಿ.

Leave A Reply

Your email address will not be published.

error: Content is protected !!