ಶಿವಮೊಗ್ಗ: ವಿವಿಧ ಕಾರಣಗಳಿಂದಾಗಿ ತೆರವಾಗಿರುವ ಹೊಸನಗರ ಹಾಗೂ ಭದ್ರಾವತಿ ತಾಲೂಕಿನ ಒಟ್ಟು ಮೂರು ಗ್ರಾಮ ಪಂಚಾಯಿತಿ 4 ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿದೆ.
ಫೆ.25ರಂದು ಮತದಾನ ನಡೆಯಲಿದ್ದು ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 4 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿಯ ಒಂದು ಸ್ಥಾನ, ನಾಗೋಡಿ (ನಿಟ್ಟೂರು) ಗ್ರಾಮ ಪಂಚಾಯಿತಿಯ ಎರಡು ಸ್ಥಾನ, ಭದ್ರಾವತಿ ಯಡೇಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದೆ.
ಫೆ.8ರಂದು ಉಪ ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಫೆ.14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಉಮೇದುವಾರಿಕೆ ಹಿಂಪಡೆಯಲು ಫೆ.17ರಂದು ಕೊನೆಯ ದಿನ. ಫೆ.25ರಂದು ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯಕತೆ ಇದ್ದರೆ ಫೆ.27ರಂದು ನಡೆಸಬಹುದಾಗಿದೆ. ಫೆ.28ರಂದು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.