ಹೊಸನಗರ ತಾಲ್ಲೂಕಿನ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಸಾಗುವಳಿ ಜಮೀನಿನ ವಿವರ ಸೇರಿಸಲು ತಹಶೀಲ್ದಾರ್ ರಶ್ಮಿ ಸೂಚನೆ

0 3,570

ಹೊಸನಗರ : ತಾಲ್ಲೂಕಿನ ಬರ ಪರಿಹಾರ, ಬೆಳೆವಿಮೆ, (Crop Insurance) ಬೆಂಬಲ ಬೆಲೆ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಫ್ರೂಟ್ಸ್ (FRUITS ID) ತಂತ್ರಾಂಶದಲ್ಲಿ ತಮ್ಮ ಜಮೀನಿನ ವಿವರ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು ರೈತರು (Farmers) ಜಮೀನಿನ ಎಲ್ಲಾ ದಾಖಲೆಗಳನ್ನು ಈ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಹೊಸನಗರ (Hosanagara) ತಹಶೀಲ್ದಾರ್ ರಶ್ಮಿ ಸೂಚಿಸಿದ್ದಾರೆ.

ಹೊಸನಗರದ ತಾಲ್ಲೂಕು ಕಛೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹೊಸನಗರ ತಾಲ್ಲೂಕು ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವುದರಿಂದ ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಒಟ್ಟು ವಿಸ್ತೀರ್ಣ ಮತ್ತು ಬೆಲೆ ಸಮೀಕ್ಷೆ ದಂತ್ತಾಂಶದ ಆಧಾರದ ಮೇಲೆ ಬೆಳೆನಷ್ಟ ಪರಿಹಾರ, ನೆರವಾಗಿ ರೈತರ ಖಾತೆಗೆ ವರ್ಗಾವಣೆಯಾಗಲಿದೆ. ತಾಲ್ಲೂಕಿನದ್ಯಾಂತ ಫ್ರೂಟ್ಸ್ ನೊಂದಣಿ ಅಭಿಯಾನ ಹಮ್ಮಿಕೊಂಡಿದ್ದು ರೈತರು ತಮ್ಮ ಜಮೀನಿನ ಎಲ್ಲ ಪಹಣಿಗಳಿಗೆ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೇ ಜೋಡಣೆ ಮಾಡಲು ತಮ್ಮ ಗ್ರಾಮದ ಆಡಳಿತಾಧಿಕಾರಿಗಳು ಅಥವಾ ನಾಡ ಕಛೇರಿ ರೈತ ಸಂಪರ್ಕ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆಗಳನ್ನ ಸಂಪರ್ಕಿಸಬೇಕೆಂದು ಕೇಳಿಕೊಂಡರು.


ಈ ಸಂದರ್ಭದಲ್ಲಿ ಶಿರಾಸ್ಥೆದಾರ್ ಸುಧೀಂದ್ರ ಕುಮಾರ್, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರೆವಿನ್ಯೂ ಇನ್ಸ್‌ಪೆಕ್ಟರ್ ರೇಣುಕಯ್ಯ, ಗ್ರಾಮ ಲೆಕ್ಕಾಧಿಕಾರಿಗಳಾದ ಕೌಶಿಕ್, ನವೀನ್, ಸಿದ್ದಪ್ಪ, ಲೋಹಿತ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!