ಶಿವಮೊಗ್ಗ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ ಸದಸ್ಯರ ಸ್ಥಾನಗಳಿಗೆ ಫೆ.25 ರಂದು ಚುನಾವಣೆ ನಡೆಯಲಿದೆ.
ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಉಪ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಫೆ. 25 ರಂದು ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ.
ಫೆ. 24 ರಂದು ಅಪರಾಹ್ನ ಮತಗಟ್ಟೆ ಅಧಿಕಾರಿ/
ಸಿಬ್ಬಂದಿಗಳು ನಿಗದಿಪಡಿಸಿದ ಮತಗಟ್ಟೆಗಳಿಗೆ ಆಗಮಿಸಿ ಮತದಾನದ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವರು.
ಮತದಾನ ಕೇಂದ್ರವಿರುವ ಬಹುತೇಕ ಕಟ್ಟಡಗಳು ಶಾಲೆಗಳಿದ್ದು, ಮತದಾನದ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಆಗಮಿಸುವುದರಿಂದ ಈ ವೇಳೆಯಲ್ಲಿ ಜನದಟ್ಟನೆಯಾಗಿ ಮತದಾನದ ಪ್ರಕ್ರಿಯೆ ಮೇಲೆ ವ್ಯತಿರಿಕ್ತ ಪರಿಣಾಮದ ಸಂಭವವಿರುವುದರಿಂದ ಈ ಪ್ರಯುಕ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮವಾಗಿ ನಡೆಸಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಈ ಕೆಳಕಂಡ ಮತದಾನ ಕೇಂದ್ರವಿರುವ ಶಾಲೆಗಳಿಗೆ ಫೆ.25 ರ ಶನಿವಾರ ರಜೆ ಘೋಷಿಸಿ ಆದೇಶಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಮತದಾನ ಕೇಂದ್ರವಿರುವ ಶಾಲೆ ಹೆಸರು :
- ಹೊಸನಗರ ತಾಲೂಕಿನ ಕೋಟೆಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
- ಹೊಸನಗರ ತಾಲೂಕಿನ ಹೆಬ್ಬಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
- ಹೊಸನಗರ ತಾಲೂಕಿನ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
- ಭದ್ರಾವತಿ ತಾಲೂಕಿನ ಚಂದನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.