ಅಭಿವೃದ್ಧಿಗೆ ಅನುದಾನದ ಕೊರತೆಯಿಲ್ಲ ; ಬೇಳೂರು

0 314

ರಿಪ್ಪನ್‌ಪೇಟೆ : ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಆಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ 2.50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಯೊಂದಿಗೆ ಅಭಿವೃದ್ಧಿ ಕಾಮಗಾರಿಗೂ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದು ಅಭಿವೃದ್ಧಿಗೆ ಅನುದಾನದ ಕೊರತೆಯಲ್ಲಿ ಈಗಾಗಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಹಿಂದಿನ ಸರ್ಕಾರದವರು ಅನುದಾನವನ್ನು ನೀಡದೆ ಅರ್ಧಕ್ಕೆ ನಿಂತ ಹಲವು ಕಾಮಗಾರಿಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಧನಲಕ್ಷ್ಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಬಂಡಿ ರಾಮಚಂದ್ರ, ಹೆಚ್.ವಿ.ಈಶ್ವರಪ್ಪಗೌಡ ಹಾರೋಹಿತ್ತಲು, ಡಿ.ಈ.ಮಧುಸೂದನ್, ಗಣಪತಿ, ಉಬೇದುಲ್ಲಾ ಷರೀಫ್, ಕೆ.ಎಸ್.ಲೋಕಪ್ಪಗೌಡ, ರಾಜುಗೌಡ, ಮಳವಳ್ಳಿ ಮಂಜುನಾಥ, ಕೆ.ದೇವರಾಜ್, ರಮೇಶ್, ಚಂದ್ರಶೇಖರ ಮಳವಳ್ಳಿ, ಕೆ.ಸಿ.ತೇಜಮೂರ್ತಿ, ದಿವಾಕರ್, ಆಸೀಫ್ ಭಾಷಾ, ಇನ್ನಿತರ ಪಕ್ಷದ ಮುಖಂಡರು ಹಾಗೂ ಎಪಿಎಂಸಿ ಅಧಿಕಾರಿಗಳು ಹಾಜರಿದ್ದರು.

Leave A Reply

Your email address will not be published.

error: Content is protected !!