ಆಗುಂಬೆ ಘಾಟ್‌ನಲ್ಲಿ ಮರ ಬಿದ್ದು ಸಂಚಾರ ಸ್ಥಗಿತ

0 396

ತೀರ್ಥಹಳ್ಳಿ : ಮಲೆನಾಡು ಶಿವಮೊಗ್ಗ ಮತ್ತು ಕರಾವಳಿ ಉಡುಪಿ ಜಿಲ್ಲೆ ಸಂಪರ್ಕಿಸುವ ಆಗುಂಬೆ ಘಾಟಿ ರಸ್ತೆಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ.

ಘಾಟ್‌ನ ಮೂರನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಕಾರಣ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದ್ದು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ.

Leave A Reply

Your email address will not be published.

error: Content is protected !!