Categories: Shivamogga

ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಶಿವಮೊಗ್ಗ : ಕೆಲವು ದಿನಗಳಿಂದ ನನ್ನ ಬಗ್ಗೆ ರಾಜಕೀಯ ಕೇಂದ್ರಿತ ಸುದ್ಧಿಗಳು ಹರಿದಾಡಿವೆ. ಎಲ್ಲರ ನಿರೀಕ್ಷೆಯಂತೆ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರನ್ನು ಭೇಟಿಯಾಗಿದ್ದೆನೆ. ನಾಳೆ ನಾನು ನನ್ನ ಸ್ನೇಹಿತರ ಜೊತೆ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೆನೆ ಎಂದು ಪ್ರಕಟಿಸಿದರು.

ವಿಧಾನಸಭಾ ಚುನಾವಣೆ ವೇಳೆಯೇ ಕಾಂಗ್ರೆಸ್ ಸೇರಬೇಕಿತ್ತು. ಆಗ ಜೆಡಿಎಸ್ ನಿಂದ ನಾನು ಸ್ಪರ್ಧೆಗಿಳಿಯಬೇಕಾಯ್ತು. ಮುಂಬರುವ ಚುನಾವಣೆಯಲ್ಲಿ ಸಮಯ, ಶಕ್ತಿ ನೀಡಿ ದುಡಿಯುವ ನಿಲುವನ್ನು ಹೊಂದಿದ್ದೆನೆ. ಮುಂಬರುವ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಇದು ನನ್ನ ಕೊನೆಯ ಬಸ್ ಸ್ಟಾಪ್

ಆಗ ಅನಿವಾರ್ಯವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದೆ. ಇದು ನನ್ನ ಕೊನೆಯ ಬಸ್ ಸ್ಟಾಪ್ ಆಗಿದೆ. ಆತಂಕಕ್ಕೆ ಒಳಗಾಗಿರುವ ಕೆಲ ನಾಲ್ಕು ಜನರು ನನಗೆ ವಿರೋಧಿಸುತ್ತಿದ್ದಾರೆ. ಕೆಲವರ ವಿರೋಧ ಇದ್ದರೂ ಶೇ. 99 ರಷ್ಟು ಜನರು ನನ್ನನ್ನು ಒಪ್ಪಿದ್ದಾರೆ. ನನಗೆ ವಿರೋಧಿಸುವವರಿಗೆ ನಾನು ಯಾವುದೇ ಅಡ್ಡಿಯಾಗಲ್ಲ. ನಿರಾಶೆಯಾದವರು ಯಾಕೋ ಆತಂಕಕ್ಕೊಳಗಾಗಿದ್ದಾರೆ. ನಾನು ಮತ್ತಷ್ಟು ಬಲ ತುಂಬಲು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಿದ್ದೆನೆ. ವಿರೋಧ ಮಾಡುವವರಿಗೆ ನಾನು ಅಡ್ಡಿಯಾಗಲ್ಲ ಎಂದು ಆಯನೂರು ಮಂಜುನಾಥ್ ಸ್ಪಷ್ಟಪಡಿಸಿದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago