Categories: RipponpeteShivamogga

“ಆಯುರ್ವೇದದಿಂದ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ” ;‘ಆಪ್ತ’ ಆಯುರ್ವೇದ ಶಿಬಿರ ಉದ್ಘಾಟಿಸಿದ ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ನಿತ್ಯ ಜೀವನದಲ್ಲಿ ಆಯುರ್ವೇದ ಪದ್ಧತಿಯನ್ನು ಆಹಾರದಲ್ಲಿ ಮತ್ತು ವಿಹಾರಗಳಲ್ಲಿ ಬಳಸಿಕೊಳ್ಳಬೇಕಾದ ಅಗತ್ಯವಿದೆ. ಆಧುನಿಕ ಜನಜೀವನದ ಜಂಜಾಟದಲ್ಲಿ ಭಾರತೀಯ ಅನಾದಿ, ಸನಾತನ ವೈದ್ಯ ಪದ್ಧತಿ, ಆಯುರ್ವೇದ ಪ್ರಸಕ್ತ ವಿಶ್ವಮಾನ್ಯವಾಗಿದೆ. ಸರ್ವರೋಗಗಳಿಗೂ ಚಿಕಿತ್ಸಾ ಪರಿಹಾರ ಉಲ್ಲೇಖಿಸಿದ ಋಷಿಮುನಿಗಳು ಪ್ರತಿಯೋರ್ವರ ಆರೋಗ್ಯ ರಕ್ಷಣೆಗೆ ಪರಿಸರದ ಗಿಡಮೂಲಿಕೆಗಳ ಬಳಕೆಯನ್ನು ದಾಖಲಿಸಿರುವುದನ್ನು ಸಂಶೋಧನಾ ವಿದ್ಯಾರ್ಥಿಗಳು ಇನ್ನಪುಟ ಅಧ್ಯಯನ ಮಾಡಿ ಆಯುರ್ವೇದ ಶಾಸ್ತ್ರವನ್ನು ನೊಬೆಲ್ ಪ್ರಶಸ್ತಿ ಗಳಿಸುವಷ್ಟು ವಿಶಿಷ್ಠ ಸ್ಥಾನಕ್ಕೇರಿಸಬೇಕು ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ತಿಳಿಸಿದರು.


ಒಂದು ವಾರ ಅವಧಿಯಲ್ಲಿ ಜರುಗುವ ಆಯುರ್ವೇದ ಶಿಬಿರ ‘ಆಪ್ತ’ ವನ್ನು ಉದ್ಘಾಟಿಸಿ “ಸಾತ್ವಿಕ ಆಹಾರ ಸೇವಿಸಿ, ಉತ್ತಮ ವಿಹಾರ ಕೈಗೊಳ್ಳುವುದನ್ನು ವೈದ್ಯರಾಗುವ ಆಯುರ್ವೇದ ವಿದ್ಯಾರ್ಥಿಗಳು ಆಯುರ್ವೇದ ತಜ್ಞರಿಂದ ಮಾಹಿತಿ ಪಡೆದು ದೇಶದ ಆರೋಗ್ಯ ಕ್ಷೇತ್ರದಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿಗೆ ವಿಶಿಷ್ಟ ಸ್ಥಾನ-ಮಾನ-ಗೌರವ ದೊರೆಕಿಸುವಂತಾಗಲಿ” ಎಂದು ಶುಭ ಹಾರೈಸಿದರು.


ಜೈನ ಆಯುರ್ವೇದ ಪದ್ಧತಿ, ಔಷಧ ತಯಾರಿಕೆ, ಕುಂದಾದ್ರಿ ಬೆಟ್ಟದ ಅಮೂಲ್ಯ ಗಿಡಮೂಲಿಕೆಗಳ ಕುರಿತು ಶ್ರೀಗಳು ಉಲ್ಲೇಖಿಸುತ್ತಾ ಪೂಜ್ಯಪಾದ ಮುನಿಶ್ರೀಗಳ ಚಿಕಿತ್ಸಾ ಪದ್ಧತಿ ಸಂಶೋಧನೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರವು ಮಾನಸಿಕ, ಶಾರೀರಿಕ, ಸ್ವಾಸ್ಥ್ಯ ರಕ್ಷಣೆಗೆ ಪ್ರಥಮ ಪ್ರಾಶಸ್ತ್ಯ ನೀಡುತ್ತಲಿದೆಯೆಂದರು.
ವೈದ್ಯರಾದ ಡಾ. ಜೀವಂಧರ ಜೈನ್ ಉಪಸ್ಥಿತರಿದ್ದು ಮಾತನಾಡಿದರು. ಡಾ. ಅರ್ಹಂತ್ ಕುಮಾರ್ ಎ. ಡಾ. ಆನಂದ ಕಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ. ಸುಶ್ರೂತ್ ಜೈನ್ ಸ್ವಾಗತಿಸಿದರು. ಹಿತೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago