ಆಳ್ವಾಸ್ ಶೈಕ್ಷಣಿಕ ಪ್ರವೇಶ ಪರೀಕ್ಷೆಯೊಂದಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0 403

ರಿಪ್ಪನ್‌ಪೇಟೆ: ಏಪ್ರಿಲ್ 14 ರಂದು ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದ್ದು ಮಲೆನಾಡಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸುವರ್ಣಾವಕಾಸವಾಗಿದ್ದು ಸಿಬಿಎಸ್‌ಇ, ಐಸಿಎಸ್‌ಸಿ ಮತ್ತು ರಾಜ್ಯ ಪಠ್ಯಕ್ರಮದ ಕನ್ನಡ ಇಂಗ್ಲೀಷ್ ಮಾಧ್ಯಮದ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ರಿಪ್ಪನ್‌ಪೇಟೆಯ ಆಳ್ವಾಸ್ ಘಟಕದ ಸಂಚಾಲಕ ಎನ್. ಸತೀಶ್ ತಿಳಿಸಿದರು.

ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕು ದಶಕಗಳಿಮದ ನಾಡಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸುತ್ತಾ ಶೈಕ್ಷಣಿಕ ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ ಸಹಾಯಧನ. ವಿವಿಧ ಶಿಷ್ಯವೇತನ ಬಹುಮಾನ ಪುರಸ್ಕಾರಗಳನ್ನು ವಿತರಿಸುತ್ತಾ ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನವು ಈ ಬಾರಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ ಎಂದರು.

ಎಸ್.ಎಸ್.ಎಲ್.ಸಿ.ತರಗತಿಯಲ್ಲಿ ಸಿಬಿಎಸ್‌ಸಿ, ಐಸಿಎಸ್‌ಇ. (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ-ಭಾರತೀಯ ಪ್ರೌಢಶಿಕ್ಷಣ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯ ಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ )ಪರೀಕ್ಷೆ ಬರೆದ ವಿಧ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಬಹುದಾಗಿದೆ. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಅಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅಯ್ಕೆಯಾದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಮತ್ತು ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಕಾಲೇಜಿನಲ್ಲಿ ವಿಜ್ಞಾನ ವಾಣಿಜ್ಯ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ.

ಇದೇ 14 ರಂದು ನಡೆಯುವ ಪ್ರವೇಶ ಪರಿಕ್ಷಾಗೆ ಹಾಜರಾಗಬಯಸುವ ವಿದ್ಯಾರ್ಥಿಗಳು ಮೂಡುಬಿದರೆಯ ವಿದ್ಯಾಗಿರಿ ಆಳ್ವ ಅವರಣದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜ್‌ಗೆ ಅಗಮಿಸಿ ಪರೀಕ್ಷೆ ಬರೆಯಬಹುದು. ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ.
ಅಲ್ಲದೆ ಈ ಪರೀಕ್ಷೆಗೆ ಹೋಗವ ವಿದ್ಯಾರ್ಥಿಗಳು ಆಧಾರಕಾರ್ಡ್ ಮತ್ತು ಇತ್ತೀಚಿನ ಭಾವಚಿತ್ರವನ್ನು ಕಡ್ಡಾಯವಾಗಿ ತರುವುದು ಹಾಗೂ ರಾತ್ರಿ ಉಳಿಯಲು ರೂಂ ವ್ಯವಸ್ಥೆಯೊಂದಿಗೆ ಉಪಹಾರದ ವ್ಯವಸ್ಥೆಯನ್ನು ಸಹ ಸಂಸ್ಥೆಯಿಂದ ಉಚಿತವಾಗಿ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು https://scholarship.alvas.org/puc/login.php ಈ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Leave A Reply

Your email address will not be published.

error: Content is protected !!