ಇಂದು ಕೂಡ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೋರು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

0 1,533

ಶಿವಮೊಗ್ಗ/ಚಿಕ್ಕಮಗಳೂರು : ಶಿವಮೊಗ್ಗ ಜಿಲ್ಲೆಯ ಹಲವೆಡೆ ಬಿರುಗಾಳಿ, ಗುಡುಗು ಸಮೇತ ಗುರುವಾರ ಜೋರು ಮಳೆಯಾಗಿದೆ ‌

ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಏಪ್ರಿಲ್ 20 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಏಪ್ರಿಲ್ 23ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದೆಡೆ ಒಣಹವೆ ಮುಂದುವರೆಯಲಿದೆ.

Leave A Reply

Your email address will not be published.

error: Content is protected !!