Categories: Shivamogga

ಇಲಾಖಾ ಪರೀಕ್ಷೆಗಳಿಗೆ ಸಕಲ ಸಿದ್ದತೆ : ಡಾ.ಸೆಲ್ವಮಣಿ ಆರ್


ಶಿವಮೊಗ್ಗ: 2021 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿದ್ದು ಜಿಲ್ಲೆಯಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚಿಸಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಇಲಾಖಾ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್, ಸರ್ಕಾರಿ ಪಿಯು ಕಾಲೇಜು, ಸಹ್ಯಾದ್ರಿ ವಾಣಿಜ್ಯ ಕಾಲೇಜು ಮತ್ತು ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಒಟ್ಟು 04 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ಜೂನ್ 09 ರಿಂದ 11 ಮತ್ತು ಜೂನ್ 26 ರಿಂದ ಜುಲೈ 09(29-06-2023 ರಿಂದ 03-07-2023 ರ ದಿನಗಳನ್ನು ಹೊರತುಪಡಿಸಿ) ರವರೆಗೆ ನಡೆಯಲಿವೆ.


ಈಗಾಗಲೇ ಸ್ಥಳೀಯ ನಿರೀಕ್ಷಣಾಧಿಕಾರಿ, ವೀಕ್ಷಕರು ಮತ್ತು ಮಾರ್ಗಾಧಿಕಾರಿಗಳನ್ನು ನೇಮಿಸಿ ಪರೀಕ್ಷೆ ಸಂಬಂಧ ಅನುಸರಿಸಬೇಕಾದ ಮಾರ್ಗಸೂಚಿ ಮತ್ತು ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪ್ರತಿ ಕೇಂದ್ರಗಳಿಗೂ ಇಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.


ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಅಭ್ಯರ್ಥಿಗಳು ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಎಂದು ಸೂಚನೆ ನೀಡಿದರು.
ಪರೀಕ್ಷಾ ದಿನಗಳಂದು ಯಾವುದೇ ಅಹಿತರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಬೆಳಿಗ್ಗೆ 8 ರಿಂದ ಸಂಜೆ 5.30 ರವರೆಗೆ ಸಿಆರ್‍ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.


ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಗೊಂದಲಗಳಿಗೆ ಒಳಗಾಗದೇ, ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಜಿಲ್ಲಾ ಖಜನಾಧಿಕಾರಿ ಸಾವಿತ್ರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ, ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ಇತರೆ ಅಧಿಕಾರಿಗಳು ಹಾಜರಿದ್ದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

12 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

14 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

15 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

16 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

17 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

19 hours ago