Categories: Shivamogga

ಈಶ್ವರಪ್ಪ ಆಗಲಿ ಅಥವಾ ಅವರ ಮಗನೇ ಆಗಲಿ ಸ್ಪರ್ಧೆ ಮಾಡಬೇಕು ಅವರ ವಿರುದ್ಧವೇ ನಾನು ಸ್ಪರ್ಧಿಸುತ್ತೇನೆ ; ಆಯನೂರು ಮಂಜುನಾಥ್

ಶಿವಮೊಗ್ಗ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಆಯನೂರು ಮಂಜುನಾಥ್ ಇಂದು ಶಾಸಕರ ಹೊಸ ಕಾರ್ಯಾಲಯ ಉದ್ಘಾಟಿಸುವ ಮೂಲಕ ಕಾದುನೋಡುವ ತಂತ್ರಕ್ಕೆ ಜಾರಿದ್ದಾರೆ.

ಅವರು ಇಂದು ಬಿಜೆಪಿ ಕಚೇರಿಯ ಸನಿಹದಲ್ಲೇ ಶಾಸಕರ ಹೊಸ ಕಾರ್ಯಾಲಯವನ್ನು ಶುಭಾರಂಭ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ನನ್ನ ಅಧಿಕೃತ ಕಚೇರಿಯನ್ನು ಮುಚ್ಚಲಾಗಿದೆ. ಆದ್ದರಿಂದ ಜನರೊಂದಿಗೆ ಬೆರೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಹೊಸ ಕಾರ್ಯಾಲಯವನ್ನು ಆರಂಭಿಸಿದ್ದೇನೆ ಎಂದರು.

ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಆದರೆ ಅದೇ ಮುಖ್ಯವಲ್ಲ. ಮುಖ್ಯವಾಗಿ ಶಿವಮೊಗ್ಗದಲ್ಲಿ ಶಾಂತಿ ಬಯಸುವವನು ನಾನು. ಈಗಲೂ ಮತ್ತೆ ಮತ್ತೆ ಹೇಳುತ್ತೇನೆ. ಕೆ.ಎಸ್. ಈಶ್ವರಪ್ಪ ಅವರಾಗಲಿ ಅಥವಾ ಅವರ ಮಗನೇ ಆಗಲಿ ಸ್ಪರ್ಧೇ ಮಾಡಬೇಕು. ಅವರ ವಿರುದ್ಧವೇ ನಾನು ಸ್ಪರ್ಧಿಸುತ್ತೇನೆ. ಹಾಗಂತ ಅವರ ಕೈಗೊಂಬೆಯಂತಿರುವವರು ಸ್ಪರ್ಧಿಸಿದರೂ ಕೂಡ ನಾನು ಅವರ ವಿರುದ್ಧ ಸ್ಪರ್ಧಿಸುತ್ತೇನೆ. ನನಗೆ ಶಾಂತಿ ಮುಖ್ಯ ಎಂದರು.

ಮೋದಿ ಮತ್ತು ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ. ಇಲ್ಲಿ ಕುಟುಂಬ ರಾಜಕಾರಣವಿದೆ. ವಯಸ್ಸಿನ ಏರುಪೇರಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಮೋದಿಯವರು ತಮ್ಮ ಕುಟುಂಬವನ್ನೇ ಏಕೆ, ತಮ್ಮ ತಾಯಿಯವರನ್ನೇ ರಾಜಕೀಯದ ನೆರಳನ್ನೂ ಕಾಣದಂತೆ ಸಾಕಿದ್ದವರು. ಅಂತಹ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಇಲ್ಲಿ ಯಾರಿಗೂ ಇಲ್ಲ. ಹಾಗಾಗಿ ಗುಜರಾತ್ ಮಾದರಿಯ ಮೋದಿ ಮಾದರಿಯ ಚುನಾವಣೆ ಎಲ್ಲಿ ಸಾಧ್ಯ ಎಂದರು.

ನೀವು ವಿಧಾನಸಭೆ ಪ್ರವೇಶ ಮಾಡಲೇಬೇಕು ಎಂದು ಹಲವು ಗೆಳೆಯರು, ಮತದಾರರು, ಬಿಜೆಪಿ ಕಾರ್ಯಕರ್ತರು ಅಭಿಲಾಷೆ ಪಡುತ್ತಿದ್ದಾರೆ. ಕಾರ್ಮಿಕರು, ಆಟೋ ಚಾಲಕರು ಒತ್ತಾಯ ಮಾಡುತ್ತಿದ್ದಾರೆ. ಅವರ ಪ್ರೀತಿಗೆ ಹೃದಯ ತುಂಬಿ ಬಂದಿದೆ. ನನ್ನ ಎಲ್ಲಾ ನಿರ್ಧಾ ರಗಳನ್ನು ಎಲ್ಲರ ಸಲಹೆ ಪಡೆದೇ ತೆಗೆದುಕೊಳ್ಳುತ್ತೇನೆ ಈ ಎಲ್ಲಾ ನಿರ್ಧಾರ ತೆಗೆದುಕೊಳ್ಳಲು ಮೂರು ನಾಲ್ಕು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದರು.

Malnad Times

Recent Posts

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

2 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

4 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

6 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

9 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

13 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

1 day ago