ಎಂ ಗುಡ್ಡೆಕೊಪ್ಪ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಉಮೇಶ್ ವಿಧಿವಶ !

0 1,384

ಹೊಸನಗರ : ಪಟ್ಟಣದ ಜೆಸಿಎಂ ರಸ್ತೆ ನಿವಾಸಿ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ಉಮೇಶ್ ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಧ್ಯಾಹ್ನ ನಿಧನರಾದರು.

ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಉಮೇಶ್ ಪಿಗ್ಮಿ ಸಂಗ್ರಹಕಾರರಾಗಿದ್ದು ಅವರ ನಿಧನಕ್ಕೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಿಡಿಒ, ಕಚೇರಿ ಸಿಬ್ಬಂದಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

Leave A Reply

Your email address will not be published.

error: Content is protected !!