Categories: AccidentShivamogga

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ !

ಶಿವಮೊಗ್ಗ : ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ‌ ಶಂಕೆ ಇದೆ.

ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಚೋರಡಿ ಬಳಿ ಈ ಅಪಘಾತ ಸಂಭವಿಸಿದೆ. ಎರಡು ಬಸ್ಸಿನಲ್ಲಿದ್ದ ಇನ್ನಷ್ಟು ಪ್ರಯಾಣಿಕರಿಗೆ ಗಂಭೀರ ಗಾಯವಾದ ಬಗ್ಗೆ ವರದಿಯಾಗಿದೆ.

ಈ ಅಪಘಾತದಲ್ಲಿ ಎರಡೂ ಬಸ್‌ಗಳು ಒಂದಕ್ಕೊಂದು ಸೇರಿಕೊಂಡಿದ್ದು ಜೆಸಿಬಿ ಬಳಸಿ ಬೇರ್ಪಡಿಸಿ ಬಸ್‌ಗಳ ಮಧ್ಯೆ ಸಿಲುಕಿಕೊಂಡಿರುವ ಪ್ರಯಾಣಿಕರನ್ನೂ ರಕ್ಷಣೆ ಕಾರ್ಯ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎರಡು ಬಸ್‌ಗಳು ಶಿಕಾರಿಪುರದ ರೂಟ್ ಬಸ್‌ಗಳಾಗಿದ್ದು ಪರಸ್ಪರ ಡಿಕ್ಕಿಯಾಗಿದೆ. ಕುಮುದ್ವತಿ ಸೇತುವೆ ಬಳಿ ಘಟನೆ ನಡೆದಿದ್ದು ಸ್ಥಳಕ್ಕೆ ನಾಲ್ಕು ಆಂಬುಲೆನ್ಸ್ ಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದೆ.

ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

6 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

12 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

21 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago