Categories: Shivamogga

ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 ; ಸಕಲ ಸಿದ್ದತೆಗೆ ಸೂಚನೆ

ಶಿವಮೊಗ್ಗ: ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಶಿವಮೊಗ್ಗದ 02 ಮತ್ತು ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲ್ಲೂಕುಗಳಲ್ಲಿನ 01 ಪರೀಕ್ಷಾ ಕೇಂದ್ರ ಸೇರಿ ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 3531 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.


ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ದಿನಾಂಕ 16.05.2024 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 02.15 ರಿಂದ ಸಂಜೆ 04.30 ರವರೆಗೆ ನಡೆಯಲಿದೆ.


ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ.


ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ.


ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಅವರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡುವಂತೆ ತಿಳಿಸಿದರು.


ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.


ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ ಅವರು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪ್ರಭಾರ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago