ಹೊಸನಗರ : ಮಾರುತಿ ಓಮ್ನಿ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 12 ಮಂದಿಗೆ ಗಂಭೀರ ಗಾಯವಾದ ಘಟನೆ ತಾಲೂಕಿನ ಎಂ ಗುಡ್ಡೇಕೊಪ್ಪದಲ್ಲಿ ನಡೆದಿದೆ.
ಓಮ್ನಿಯಲ್ಲಿ ಸಂಚರಿಸುತ್ತಿದ್ದ ಒಂದೇ ಕುಟುಂಬದ 06 ಮಕ್ಕಳು ಸೇರಿದಂತೆ 12 ಮಂದಿಗೆ ಗಂಭೀರ ಗಾಯಗಳಾಗಿದ್ದು ಇವರೆಲ್ಲರನ್ನು ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಗುಡ್ಡ ನಿವಾಸಿಗಳಾದ ಸತ್ಯಪ್ಪ, ಶರಾವತಿ, ಜಾನಕಮ್ಮ, ಲೀಲಾವತಿ, ಪ್ರಶಾಂತ ಹಾಗೂ 11 ವರ್ಷದೊಳಗಿನ ಮಕ್ಕಳಾದ ಶ್ರವಣ್, ಶ್ರೇಯಾನ್, ಶ್ರೀಮತಿ, ಶ್ರೀಶ, ಶ್ರಾವಣಿ, ಶ್ರಾವ್ಯ ಎಂದು ಗುರುತಿಸಲಾಗಿದೆ. ಇವರೆಲ್ಲರು ಗೋಳಿಗರಡಿ ದೇವಸ್ಥಾನಕ್ಕೆ ಭೇಟಿ ನೀಡಿ ಊರಿಗೆ ವಾಪಾಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ.
ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಅಪಘಾತದ ರಭಸಕ್ಕೆ ಓಮ್ನಿ ಸಂಪೂರ್ಣ ಜಖಂಗೊಂಡಿದ್ದು ಚಾಲಕನನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.
ಗಾಯಾಳುಗಳನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲದ ಕೆಎಂಸಿ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಹೊಸನಗರ ಪಿಎಸ್ಐ ರಾಜು ರೆಡ್ಡಿ ಮತ್ತು ಸಿಬ್ಬಂದಿಗಳು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಹಜರು ಕ್ರಮ ಜರುಗಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೊಸನಗರ ತಾಲೂಕಿನಾದ್ಯಂತ ಯಮಸ್ವರೂಪಿ ಮರಳು ಸಾಗಣೆ ಟಿಪ್ಪರ್ ಲಾರಿಗಳು ವೇಗ ಮಿತಿ ಅನುಸರಿಸದೇ ಅತಿ ವೇಗದಿಂದ ವಾಹನಗಳನ್ನು ಚಲಾಯಿಸುತ್ತಿರುವ ಕಾರಣ ಪದೇಪದೇ ಇದೇ ರೀತಿ ಅಪಘಾತಗಳು ನಡೆಯುತ್ತಿದ್ದು ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…