Categories: Shivamogga

ಕಡ್ಡಾಯ ಮತದಾನ ಮಾಡಿ ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಮನವಿ


ಶಿವಮೊಗ್ಗ: ಜಿಲ್ಲೆಯ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಅತ್ಯಮೂಲ್ಯ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಜಿಲ್ಲಾ ಮತದಾರರ ವೇದಿಕೆ ಮತ್ತು ಸ್ವೀಪ್ ಸಮಿತಿ ಶಿವಮೊಗ್ಗ ಜಿಲ್ಲೆ ಇವರ ಸಹಯೋಗದಲ್ಲಿ ಇಂದು ವಿನೋಬನಗರದ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಮತದಾನ ಜಾಗೃತಿ ಸಪ್ತಾಹ ಹಾಗೂ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.


ಉತ್ತಮ ಆಡಳಿತಗಾರರನ್ನು ಆರಿಸಲು ನಾಗರೀಕರಾದ ನಾವೆಲ್ಲ ಕಡ್ಡಾಯವಾಗಿ ಮತದಾನ ಮಾಡಬೇಕು. ನಗರ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಆಗುತ್ತಿದ್ದು, ಈ ಬಾರಿ ಈ ಪ್ರಮಾಣ ಹೆಚ್ಚಬೇಕು. ಈ ನಿಟ್ಟಿನಲ್ಲಿ ನಗರದ ನಾಗರೀಕರೆಲ್ಲ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದರು.


ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಮಾತನಾಡಿ, ಮತದಾನ ಜಾಗೃತಿ ಕಾರ್ಯಕ್ರಮದ ಮುಖ್ಯ ಉದ್ದೇಶ ಮತದಾನ ಪ್ರಮಾಣ ಹೆಚ್ಚಿಸುವುದಾಗಿದ್ದು, ಜಿಲ್ಲೆಯಲ್ಲಿ ಹಲವಾರು ರೀತಿಯ ಮತದಾನ ಜಾಗೃತಿ ಕಾರ್ಯಕ್ರಮಗಳು, ಸ್ವೀಪ್ ಚಟುವಟಿಕೆಗಳ ಮೂಲಕ ಮತದಾನದ ಕುರಿತು ಜಾಗೃತಿ ಹೆಚ್ಚಿಸಲಾಗುತ್ತಿದೆ. ಅರ್ಹರೆಲ್ಲರೂ ಕಡ್ಡಾಯವಾಗಿ ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕೆಂದರು.


ಕಾರ್ಯಕ್ರಮದಲ್ಲಿ ವಿಶೇಷವಾಗಿ ಡೊಳ್ಳು ಕುಣಿತದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಹಾಗೂ ಮತದಾನ ಜಾಗೃತಿ ಮೂಡಿಸುವ ಬೀದಿನ ನಾಟಕ ತಂಡಗಳು ಪ್ರದರ್ಶನ ನೀಡಿದವು. ಸ್ಟೈಲ್ ಗ್ರೂಪ್ ಆಫ್ ಡ್ಯಾನ್ಸ್ ತಂಡದವರು ಮತದಾನ ಜಾಗೃತಿ ಗೀತೆಗಳಿಗೆ ನೃತ್ಯ ಪ್ರದರ್ಶನ ಮಾಡಿದರು. ಗಾ.ರಾ.ಶ್ರೀನಿವಾಸ್ ಮತದಾನ ಜಾಗೃತಿ ಕುರಿತು ಕವನ ವಾಚನ ಮಾಡಿದರು.


ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತರಾದ ಕೆ.ಮಾಯಣ್ಣಗೌಡ ಇವರು ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಿದರು ವಿನೋಬನಗರದ ಮತದಾರರು, ಬಿಎಲ್‍ಓಗಳು, ಮಹಾನಗರಪಾಲಿಕೆ ಸ್ವೀಪ್ ಅಧಿಕಾರಿಗಳಾದ ಸುಪ್ರಿಯಾ, ಅನುಪಮ ಮತ್ತು ತಂಡ ಇತರೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Malnad Times

Recent Posts

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

2 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

5 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

18 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

21 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

21 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

1 day ago