Categories: Shivamogga

ಕನ್ನಡ ಚಲನಚಿತ್ರಗಳು ಗೆಲ್ಲಲು ಚಿತ್ರ ಮಂದಿರಗಳ ಸಂಖ್ಯೆ ಹೆಚ್ಚಾಗಬೇಕಿದೆ ; ಪನ್ನಗಾಭರಣ

ಶಿವಮೊಗ್ಗ : ಕನ್ನಡ ಚಲನಚಿತ್ರಗಳು ಗೆಲ್ಲಲು ಚಿತ್ರ ಮಂದಿರಗಳ ಸಂಖ್ಯೆ ಹೆಚ್ಚಾಗಬೇಕಿದೆ ಎಂದು ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಪನ್ನಗಾಭರಣ ಹೇಳಿದರು.


ಮಹಾನಗರ ಪಾಲಿಕೆಯಿಂದ ದಸರಾ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ದಸರಾ ಚಲನ ಚಿತ್ರೋತ್ಸವವನ್ನು ಇಂದು ಮಲ್ಲಿಕಾರ್ಜುನ ಚಿತ್ರಮಂದಿರದ ಆವರಣದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಚಿತ್ರ ರಂಗ ಸಾಕಷ್ಟು ಬದಲಾವಣೆ ಕಾಣುತ್ತಿದೆ. ಮನೆಯಲ್ಲಿಯೇ ಚಿತ್ರವನ್ನು ನೋಡುವ ಸ್ಥಿತಿ ಉದ್ಭವವಾಗಿದೆ. ಒಟಿಟಿ, ವೂಟ್, ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಇಂದು ಜನರು ತಮಗೆ ಬೇಕಾದ ಚಿತ್ರವನ್ನು ನೋಡುವ ಅವಕಾಶ ಇರುವುದರಿಂದ ಚಿತ್ರಮಂದಿರ ಗಳಿಗೆ ಬಂದು ಸಿನಿಮಾ ನೋಡುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದರು.


ಕೌಟುಂಬಿಕ ಚಿತ್ರಗಳು ಇಂದು ಕಡಿಮೆಯಾಗುತ್ತಿವೆ. ಹಿಂದೆ ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸುತ್ತಿದ್ದರು. ಮೊಬೈಲ್ ಬಂದ ನಂತರ ಜನರು ಮೊಬೈಲ್ ನಲ್ಲೇ ಸಿನಿಮಾ ನೋಡಿಕೊಳ್ಳುತ್ತಿದ್ದಾರೆ. ಇದು ಬದಲಾದಲ್ಲಿ ಮಾತ್ರ‌ಚಲನಚಿತ್ರ ಗೆಲ್ಲಲು ಸಾಧ್ಯ
ಎಂದರು.


ಚಲನಚಿತ್ರ ಕಲಾವಿದೆ‌ ಸಂಧ್ಯಾ ಭಟ್ ಮಾತನಾಡಿ, ಕನ್ನಡ ಭಾಷೆ ಉಳಿಯಬೇಕು.‌ ಕನ್ನಡ ಚಿತ್ರಗಳನ್ನು ಬೆಳೆಸಬೇಕು. ಕನ್ನಡಿಗರು ಭಾಷೆಯನ್ನು ಸುಲಲಿತವಾಗಿ ಸುಲಭವಾಗಿ ಓದಲು ಮತ್ತು ಬರೆಯಲು ಕಲಿಯ ಬೇಕು. ಕನ್ನಡ ಅನ್ನ ಕೊಡುವ ಭಾಷೆಯಾಗಬೇಕು. ಕನ್ನಡ ಕಲಾವಿದರನ್ನು ಬೆಳೆಸಬೇಕು ಎಂದರು.

ನಟಿ ರೂಪಿಕಾ ಮಾತನಾಡಿ, ಶಿವಮೊಗ್ಗ ನನ್ನ ತವರು ಮನೆ. ಇಲ್ಲಿ ವೇದಿಕೆ ಹಂಚಿಕೊಳ್ಳುತ್ತಿರುವುದು ಸಂತೋಷದ ವಿಷಯ. ಸಿನಿಮಾ ಮಂದಿ ಕೇವಲ ಮನರಂಜನೆಗೆ ಸೀಮಿತವಾಗಬಾರದು. ಅದರಾಚೆ ಗುರುತಿಸಿಕೊಳ್ಳಬೇಕು. ಕಲಾವಿದರಿಗೆ ಸರ್ಕಾರ ಪ್ರೋತ್ಸಾಹಿಸಿ ಯೋಜನೆಗಳನ್ನು ರೂಪಿಸಬೇಕು. ಕನ್ನಡ ಚಿತ್ರ ರಂಗ ಬೆಳೆಯಬೇಕು ಎಂದರು.


ಪಾಲಿಕೆ ಸದಸ್ಯ ಹೆಚ್.ಸಿ. ಯೋಗೇಶ್ ಮಾತನಾಡಿ, ಚಿತ್ರ ಮಂದಿರಗಳು ಇಂದು ಬಾಗಿಲು ಹಾಕಿಕೊಳ್ಳುತ್ತಿವೆ. ವಾಣಿಜ್ಯ ಕೇಂದ್ರಗಳಾಗಿ ಬೆಳೆಯ ತೊಡಗಿವೆ. ಸಿನಿಮಾ ವೀಕ್ಷಕರು ಈಗ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿಲ್ಲ. ಒಂದು ವಾರ ಕಾದರೆ ಮನೆಯಲ್ಲೇ ಕುಳಿತು ನೋಡಬಹುದು ಎಂಬ ಮನೋ‌ಭಾವನೆ ಹೆಚ್ಚಿದೆ ಎಂದರು.

ವೇದಿಕೆಯಲ್ಲಿ ಶಾಸಕನಎಸ್.ಎನ್. ಚನ್ನಬಸಪ್ಪ, ಉಪ ಮೇಯರ್ ಲಕ್ಷ್ಮಿ ಶಂಕರನನಾಯಕ್, ಪಾಲಿಕೆ ಸದಸ್ಯರಾದ ಎಸ್.ಎನ್. ಮಂಜುನಾಥ್, ಯು.ಹೆಚ್. ವಿಶ್ವನಾಥ್, ಸುವರ್ಣಾ ಶಂಕರ್, ಅನಿತಾ ರವಿ ಶಂಕರ್, ಪ್ರಭಾಕರ್, ಸುರೇಖಾ ಮುರುಳೀಧರ್, ಬೆಳ್ಳಿಮಂಡಲದ ಸಂಚಾಲಕ ವೈದ್ಯನಾಥ್ ಉಪಸ್ಥಿತರಿದ್ದರು.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

5 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

15 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

21 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago